Friday, January 21, 2022

ಹಾಸನದಲ್ಲಿ ನಿಲ್ಲದ ಕಾಡಾನೆ ಹಾವಳಿ: ಬೆಳೆ ನಾಶದಿಂದ ರೈತರು ಕಂಗಾಲು

Must read

ಹಾಸನ: ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದ್ದು, ಆಲೂರು ತಾಲೂಕಿನ ರಂಗನಾಥಸ್ವಾಮಿ ಬೆಟ್ಟ ಮತ್ತು ಅಡಿಬೈಲು ಗ್ರಾಮದ ಸುತ್ತ ಕಾಡಾನೆಗಳ ಹಿಂಡು ಬೀಡುಬಿಟ್ಟಿವೆ.

ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳ ದಾಳಿಯಿಂದ ಅಡಿಬೈಲು ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು, ಫಸಲು ಕೈಗೆ ಸಿಗದೇ ರೈತರು ಕಂಗಾಲಾಗಿದ್ದಾರೆ.

ಇನ್ನು ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯದ ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ. ಮತ್ತೊಂದೆಡೆ ಕಾಡಾನೆಗಳನ್ನು ವಾಪಸ್​ ಕಾಡಿಗೆ ಅಟ್ಟಲು ಅರಣ್ಯ ಇಲಾಖೆ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.

Latest article