Monday, November 29, 2021

‘ಕಾಂಗ್ರೆಸ್​ನವರು ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ ಹಚ್ಚುವ ಕೆಲಸ ಮಾಡ್ತಿದ್ದಾರೆ’

Must read

ಹಾನಗಲ್: ಎಲ್ಲಾ ಸಮುದಾಯಗಳನ್ನ ಕಾಂಗ್ರೆಸ್ ದುರುಪಯೋಗ ಮಾಡಿಕೊಳ್ಳುತ್ತಿತ್ತು. ಕಾಂಗ್ರೆಸ್ ನಾಯಕರು ಚುನಾವಣೆ ಸಂದರ್ಭದಲ್ಲಿ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ನಾನು ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ನವರು ಶಿವಪೂಜೆಯಲ್ಲಿ ಕರಡಿ ಬಿಟ್ಟವರ ಹಾಗೆ ಬಂದಿದ್ದಾರೆ. ಸಾಮಾಜಿಕ ನ್ಯಾಯದ ಹೆಸರಲ್ಲಿ ಸಮಾಜಕ್ಕೆ ಅನ್ಯಾಯ ಮಾಡಿದ್ದಾರೆ. ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ.

ರಾಜ್ಯದಲ್ಲಿ ಬಿಜೆಪಿಯ ಸುನಾಮಿ ಎದ್ದಿದೆ. ಕಾಂಗ್ರೆಸ್ ಎಲ್ಲ ರಾಜ್ಯದಲ್ಲಿ ನೆಲ ಕಚ್ಚಿದೆ. ಇಲ್ಲಿಯೂ ಅವರನ್ನ ಮನೆಗೆ ಕಳುಹಿಸಿದ್ರೆ, ಅವರು ಪರ್ಮನೆಂಟಾಗಿ ಮನೆಯಲ್ಲಿ ಇರುತ್ತಾರೆ. ಮತಕ್ಕಾಗಿ ರಾಜಕಾರಣ ಮಾಡುವುದು ಸಣ್ಣತನ. ನಿಮ್ಮನ್ನ ವೋಟ್ ಬ್ಯಾಂಕ್ ಅಂತ ತಿಳಿದುಕೊಂಡಿದ್ದರು. ಮತ ಹಾಕಿಸಿಕೊಳ್ಳುವುದೇ ಅವರ ಕೆಲಸವಾಗಿತ್ತು. ಮತ ಪಡೆದು ನಿಮ್ಮನ್ನ ಮರೆತಿದ್ರು. ಸುಳ್ಳು ಹೇಳಿಕೊಂಡು ಓಡಾಡುವವರಿಗೆ ಮನ್ನಣೆ ಕೊಡಬೇಡಿ ಎಂದು ವಾಗ್ದಾಳಿ ನಡೆಸಿದರು.

 

 

 

 

 

 

Latest article