Wednesday, May 18, 2022

ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ದಿಢೀರ್ ಏರಿಕೆ!

Must read

ನವದೆಹಲಿ:ಸಾವಿನ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 624 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 8,503 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 474735 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 94943 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7678 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34105066 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 12,93,412 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 74,57,970 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,31,18,87,257 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Latest article