Tuesday, August 16, 2022

ಜಪಾನ್‌ ಮಾಜಿ ಪ್ರಧಾನಿ ಶಿಂಜೋ ಅಬೆ ಹತ್ಯೆಗೆ ಯತ್ನ: ಸ್ಥಿತಿ ಗಂಭೀರ

Must read

ಟೋಕಿಯೊ: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಜಪಾನ್​ನ ಕಾಲಮಾನದ ಪ್ರಕಾರ ಬೆಳಗ್ಗೆ 11.30ರ ಸುಮಾರಿಗೆ ಪ್ರಚಾರ ಭಾಷಣ ಮಾಡುತ್ತಿದ್ದ ವೇಳೆ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ತೀವ್ರ ರಕ್ತಸ್ರಾವವಾಗಿ ಕುಸಿದು ಬಿದ್ದಿದ್ದ ಶಿಂಜೋ ಅಬೆಯವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿಂಜೋ ಅಬೆಯವರ ಸ್ಥಿತಿ ಗಂಭಿರವಾಗಿದೆ ಎಂದು ವರದಿಗಳು ತಿಳಿಸಿವೆ.

ಇನ್ನು ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ಮುಂದುವರಿಸಿದ್ದಾರೆ.

Latest article