ಲಂಡನ್: ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎಲಿಜಬೆತ್-II ನಿನ್ನೆ ರಾತ್ರಿ ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ ರಾಣಿ ಎಲಿಜಬೆತ್-II ಅವರು ಬ್ರಿಟನ್ನ ಬಲ್ಮೋರಾಲ್ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
1953 ರಿಂದ ಬ್ರಿಟನ್ ರಾಣಿಯಾಗಿ ಸುದೀರ್ಘ ಏಳು ದಶಕಗಳ ಕಾಲ ಸೇವೆ ಸಲ್ಲಿಸಿರುವ ಎಲಿಜಬೆತ್ ಅವರ ನಿಧನಕ್ಕೆ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
I had memorable meetings with Her Majesty Queen Elizabeth II during my UK visits in 2015 and 2018. I will never forget her warmth and kindness. During one of the meetings she showed me the handkerchief Mahatma Gandhi gifted her on her wedding. I will always cherish that gesture. pic.twitter.com/3aACbxhLgC
— Narendra Modi (@narendramodi) September 8, 2022