ಕಲಬುರಗಿ: ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಅಲ್ಲಿ ಕಾಂಗ್ರೆಸ್ ಮುಸ್ಲಿಮರ ತುಷ್ಠಿಕರಣ ಮಾಡ್ತಿದೆ. ಕಾಂಗ್ರೆಸ್ ಮುಸ್ಲಿಮರ ತುಷ್ಠಿಕರಣ ಮಾಡಿದ್ದಕ್ಕೆ ಇಂತಹ ಘಟನೆ ಜರುಗಿದೆ ಎಂದು ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ನಯ್ಯ ಕೊಲೆ ಪ್ರಕರಣ ಇಡೀ ದೇಶವೇ ತಲೆತಗ್ಗಿಸುವಂತಹ ವಿಚಾರ. ಕನ್ಹಯ್ಯ ಲಾಲ್ರನ್ನು ಅಂಗಡಿಗೆ ನುಗ್ಗಿ ಕೊಲೆ ಮಾಡಿದ್ದಾರೆ. ಆರೋಪಿ ಮೊಹಮ್ಮದ್ ರಿಯಾಜ್ ಮತ್ತು ಅನ್ಸಾರಿಯನ್ನು ಗುಂಡಿಟ್ಟು ಹತ್ಯೆ ಮಾಡಬೇಕು. ಕೊಲೆ ಮಾಡಿದ ನಂತರ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದಾರೆ.
ಹತ್ಯೆಯ ನಂತರ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ಮೋದಿಯನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾರೆ. ವಿಡಿಯೋ ಹರಿಬಿಟ್ಟು ಅಲ್ಲಿ ಮತ್ತೆ ಪರಿಸ್ಥಿತಿ ಉದ್ವಿಗ್ನವಾಗುವಂತೆ ಮಾಡಿದ್ದಾರೆ. ಇಂತಹಹ ಕೊಲೆ ಗಡುಕರು ಇವರು ಐಸಿಸ್ನ ಏಜೆಂಟರು. ಇವರನ್ನು ಅರೆಸ್ಟ್ ಮಾಡಿ, ಜೈಲಿಗೆ ಹಾಕಿ ಪೋಷಿಸಬಾರದು. ಕಂಡಲ್ಲಿ ಗುಂಡಿಟ್ಟು ಹತ್ಯೆ ಮಾಡಬೇಕು.
ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಅಲ್ಲಿ ಕಾಂಗ್ರೆಸ್ ಮುಸ್ಲಿಮರ ತುಷ್ಠಿಕರಣ ಮಾಡ್ತಿದೆ. ಕಾಂಗ್ರೆಸ್ ಮುಸ್ಲಿಂ ತುಷ್ಠಿಕರಣ ಮಾಡಿದ್ದಕ್ಕೆ ಇಂತಹ ಘಟನೆ ಜರುಗಿದೆ. ಇಂತಹ ಘಟನೆ ಮತ್ತೆ ಮರುಕಳಿಸಬಾರದು. ಕೇಂದ್ರಸರ್ಕಾರ ರಾಜ್ಯಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು. ಒಂದು ವೇಳೆ ಇಂತಹ ಘಟನೆ ಮತ್ತೆ ಮರುಕಳಿಸಿದ್ರೆ, ಅದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಹೊರಬೇಕು. ದೇಶದಲ್ಲಿ ಬಹುಸಂಖ್ಯಾತ ಹಿಂದೂಗಳು ಸುರಕ್ಷಿತ ಇಲ್ಲ. ಅದಕ್ಕೆ ಇಂದು ನಡೆದ ಹಿಂದೂ ವ್ಯಕ್ತಿಯ ಕೊಲೆ ಸಾಕ್ಷಿ ಎಂದರು.