Tuesday, May 17, 2022

ವೈದ್ಯರ ನಿರ್ಲಕ್ಷ್ಯ ಆರೋಪ: ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Must read

ಕೊಪ್ಪಳ: ಕೊಪ್ಪಳ ತಾಲೂಕಿನ ಕುಕನೂರು ಗ್ರಾಮದಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ.

ನೆಗಡಿ ಹಾಗೂ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮುದಿಯಪ್ಪ ಹಗೆದಾಳ ಎಂಬ ವ್ಯಕ್ತಿ ಕೊಪ್ಪಳ ಆಸ್ಪತ್ರೆಗೆ ಬಂದಿದ್ದರು. ಆದರೆ, ವೈದ್ಯರು ಸರಿಯಾದ ಸಮಯಕ್ಕೆ ಬಾರದ ಹಿನ್ನೆಲೆಯಲ್ಲಿ ಮುದಿಯಪ್ಪ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ವೈದ್ಯರ ನಿರ್ಲಕ್ಷ್ಯದಿಂದಲೇ ಮೃತಪಟ್ಟಿರುವುದಾಗಿ ಮೃತ ವ್ಯಕ್ತಿಯ ಸಂಬಂಧಿಕರು ಆಸ್ಪತ್ರೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

 

Latest article