Tuesday, May 17, 2022

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

Must read

ಕೊಪ್ಪಳ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ತಾಲೂಕಿನ ಶಹಪೂರ ಗ್ರಾಮದ ಬಳಿ ನಡೆದಿದೆ.

ಶಹಪೂರ ಗ್ರಾಮದ ಬೋಜಪ್ಪ (28) ಮೃತ ದುರ್ದೈವಿ. ರಸ್ತೆಯಲ್ಲಿ ಸಮರ್ಪಕ ವಿದ್ಯುತ್ ವ್ಯವಸ್ಥೆ ಇಲ್ಲದಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಅಪಘಾತದ ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ.

ಟೋಲ್ ಗೇಟ್ ಸಂಸ್ಥೆ ವಿರುದ್ಧ ಶಹಪೂರ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಟೋಲ್ ಗೇಟ್ ಮುಂದೆ ಶವವಿಟ್ಟು ಪ್ರತಿಭಟನೆಗೆ ಮುಂದಾಗಿದ್ದರು. ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು, ಹೆದ್ದಾರಿ ತಡೆಯದಂತೆ ಮನವೊಲಿಸಿದ್ದಾರೆ.

Latest article