ಮಂಡ್ಯ; ಜಿಲ್ಲೆಯ ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ನರ್ಸಿಂಗ್ ಕಾಲೇಜಿನ 4 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಡಿ.20ರಂದು ಕೊಲ್ಕತ್ತಾದಿಂದ 67 ವಿದ್ಯಾರ್ಥಿಗಳು ಆಗಮಿಸಿದ್ದರು. 1 ವಾರದ ಹೋಂ ಕ್ವಾರಂಟೈನ್ ಬಳಿಕ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಪರೀಕ್ಷೆಯಲ್ಲಿ 67 ವಿದ್ಯಾರ್ಥಿಗಳ ಪೈಕಿ ನಾಲ್ವರಿಗೆ ಸೋಂಕು ದೃಢಪಟ್ಟಿದೆ. ಸೋಂಕಿತ ವಿದ್ಯಾರ್ಥಿಗಳ ಸಂಪರ್ಕದಲ್ಲಿದ್ದ 137 ಜನರನ್ನು ಪರೀಕ್ಷೆ ಮಾಡಲಾಗಿದ್ದು, ಇಂದು ಸಂಜೆ ರಿಪೋರ್ಟ್ ಬರುವ ಸಾಧ್ಯತೆಯಿದೆ.
4 ಸೋಂಕಿತ ವಿದ್ಯಾರ್ಥಿಗಳಲ್ಲಿ ಒಮಿಕ್ರಾನ್ ಪತ್ತೆಗೆ ಜಿನೋ ಸಿಕ್ವೆನ್ಸಿ ಟೆಸ್ಟ್ ಮಾದರಿ ರವಾನಿಸಲಾಗಿದೆ. ಈ ವಿದ್ಯಾರ್ಥಿಗಳ ಜೊತೆಗೆ ಆದಿಚುಂಚನಗಿರಿ ಆಸ್ಪತ್ರೆ ಸರ್ಜನ್ ಹಾಗೂ ಬೆಳ್ಳೂರು ಆರೋಗ್ಯ ಕೇಂದ್ರದ ಇಬ್ಬರೂ ವೈದ್ಯರಿಗೂ ಕೋವಿಡ್ ವಕ್ಕರಿಸಿದೆ.