Tuesday, August 16, 2022

ಚಲಿಸುತ್ತಿರುವಾಗಲೇ ಧಗಧಗ ಹೊತ್ತಿ ಉರಿದ ಸ್ಕೂಟರ್​: ಸವಾರರ ಸ್ಥಿತಿ ಏನಾಯ್ತು..?

Must read

ಮಂಡ್ಯ: ಚಲಿಸುತ್ತಿದ್ದ ಸ್ಕೂಟರ್ ಹೊತ್ತಿ ಉರಿದ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ಬಳಿ ನಡೆದಿದೆ.

ಮೈಸೂರು ಮೂಲದ ಶಿವರಾಮು ಹಾಗೂ ಅನಂತರಾಮಯ್ಯ ಸ್ಕೂಟರ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಹೊತ್ತಿ ಉರಿದಿದೆ.

ಘಟನೆಯಲ್ಲಿ ಸುಟ್ಟ ಗಾಯಗಳಿಂದ ನರಳುತ್ತಿದ್ದ ಸವಾರರನ್ನು ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ.
ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Latest article