Thursday, October 6, 2022

ಐದು ರೂಪಾಯಿ ಡಾಕ್ಟರ್ ಆರೋಗ್ಯದಲ್ಲಿ ಮತ್ತೆ ಏರುಪೇರು: ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಗೆ ಶಿಫ್ಟ್​​

Must read

ಮಂಡ್ಯ: ಐದು ರೂಪಾಯಿ ಡಾಕ್ಟರ್ ಎಂದೇ ಖ್ಯಾತಿ ಪಡೆದಿರುವ ಡಾ.ಎಸ್.ಸಿ.ಶಂಕರೇಗೌಡ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಮೈಸೂರಿನಿಂದ ಬೆಂಗಳೂರಿಗೆ ರವಾನಿಸಲಾಗಿದೆ.

ಮಂಡ್ಯದಲ್ಲಿ ಐದು ರೂಪಾಯಿ ಡಾಕ್ಟರ್ ಎಂದೇ ಖ್ಯಾತಿ ಪಡೆದಿರುವ ಡಾ.ಶಂಕರೇಗೌಡ ಅವರಿಗೆ ಸೋಮವಾರ ರಾತ್ರಿ ಲಘು ಹೃದಯಾಘಾತ ಸಂಭವಿಸಿತ್ತು. ಕೂಡಲೇ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದೀಗ ಮತ್ತೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಗೆ ರವಾನಿಸಲಾಗಿದೆ.

Latest article