Tuesday, November 29, 2022

ಅರಣ್ಯ ಸಿಬ್ಬಂದಿಗೆ ಬೆಂಕಿ ಹಾಕಿ, ಬಂದಿದ್ದನ್ನು ನಾನು ನೋಡಿಕೊಳ್ತೇನೆ: ಶಾಸಕ ಸುರೇಶ್ ಗೌಡ

Must read

ಮಂಡ್ಯ: ಅರಣ್ಯ ಸಿಬ್ಬಂದಿಗೆ ಬೆಂಕಿ ಹಾಕಿ. ಬಂದಿದ್ದನ್ನು ನಾನು ನೋಡಿಕೊಳ್ತೇನೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗೆ ನಾಗಮಂಗಲ ಜೆಡಿಎಸ್‌ ಶಾಸಕ ಸುರೇಶ್ ಗೌಡ ಬಹಿರಂಗವಾಗಿಯೇ ಬೆದರಿಕೆ ಹಾಕಿದ್ದಾರೆ.

ನಾಗಮಂಗಲ ತಾಲೂಕಿನ ಹಾಲತಿ ಗ್ರಾಮದಲ್ಲಿ ಘಟನೆ ಜರುಗಿದೆ. ಜಮೀನು ವಿಚಾರವಾಗಿ ಅರಣ್ಯ ಇಲಾಖೆ ಹಾಗೂ ರೈತರ ನಡುವೆ ಘರ್ಷಣೆ ನಡೆದಿದೆ. ಸರ್ವೆ ನಂ 135ರಲ್ಲಿ ಅರಣ್ಯ ಇಲಾಖೆ ನೆಡು ತೋಪು ಬೆಳೆಸಿತ್ತು. ಅದೇ ಜಮೀನಿಗಾಗಿ ರೈತರು ಬಗರ್ ಹುಕುಂ ಸಾಗುವಳಿ ಅರ್ಜಿ ಸಲ್ಲಿಸಿದ್ದರು. ಜಮೀನು ವಶಪಡಿಸಿಕೊಳ್ಳಲು ಬಂದ ಅಧಿಕಾರಿಗಳ ವಿರುದ್ಧ ರೈತರು ಅಸಮಾಧಾನ ವ್ಯಕ್ತಪಡಿಸಿದ್ದರು.

ಅಧಿಕಾರಿಗಳು ಗಾಳಿಯಲ್ಲಿ ಗುಂಡು ಹಾರಿಸಿ ರೈತರನ್ನು ಬೆದರಿಸಿದ್ದರು. ಅಧಿಕಾರಿಗಳ ವರ್ತನೆಗೆ ಶಾಸಕ ಸುರೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ಅವಾಚ್ಯ ಶಬ್ದಗಳಿಂದ ಬೈದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ.

Latest article