ಮಂಡ್ಯ: ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ರಿಷಿ ಕುಮಾರ್ ಸ್ವಾಮೀಜಿಯನ್ನು ಶ್ರೀರಂಗಪಟ್ಟಣ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸ್ ಠಾಣೆಗೆ ಕರೆತರುವ ಮುನ್ನ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ರಿಷಿ ಕುಮಾರ್ ಸ್ವಾಮೀಜಿ ಅವರ ಆರೋಗ್ಯ ತಪಾಸಣೆ ನಡೆಸಲಾಗಿದೆ.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ರಿಷಿ ಕುಮಾರ್ ಸ್ವಾಮೀಜಿ, ಅಯೋಧ್ಯಯಲ್ಲಿ ರಾಮ ಮಂದಿರ, ಅದೇ ರೀತಿ ಶ್ರೀರಂಗಪಟ್ಟಣದಲ್ಲಿ ಹನುಮ ಮಂದಿರ ಕಟ್ಟುತ್ತೇವೆ. ಮಸೀದಿ ನನಗೆ ದೇವಾಲಯದ ರೀತಿ ಕಾಣಿಸಿದೆ. ಅದನ್ನೇ ಹೇಳಿದ್ದೇನೆ. ಶ್ರೀರಂಗಪಟ್ಟಣದಲ್ಲಿ ಮತ್ತೊಮ್ಮೆ ಹನುಮ ಮಂದಿರ ಕಟ್ಟೇಕಟ್ಟುತ್ತೇವೆ.
ಸದ್ಯ ಪೊಲೀಸರು ಠಾಣೆಯಲ್ಲಿ ವಿಚಾರಣೆ ಮುಂದುವರಿಸಿದ್ದಾರೆ.