ಮಂಡ್ಯ: ಚರಂಡಿ ತೆಗೆಯುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಲ್ಲೂರು ಗ್ರಾಮದಲ್ಲಿ ನಡೆದಿದೆ.
ಚಂದ್ರಮ್ಮ, ಕೆಂಪಮ್ಮ ಹಾಗೂ ಸುನೀತಾ ಎನ್ನುವವರ ಮೇಲೆ ಅದೇ ಗ್ರಾಮದ ಅಂಕೇಗೌಡ, ಸಿದ್ದಪ್ಪ ಹಾಗೂ ನಂದೀಶ್ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಮೂವರು ಮಹಿಳೆಯರ ಮನೆ ಮುಂದೆ ಚರಂಡಿ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಮಹಿಳೆಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಮಾತಿನ ಚಕಮಕಿ ನಡೆದಿದ್ದು, ಗಲಾಟೆ ಅತೀರೇಖಕ್ಕೇರಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸದ್ಯ ಗಾಯಾಳುಗಳಿಗೆ ಮಂಡ್ಯ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಮಳವಳ್ಳಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.