Tuesday, May 17, 2022

ಶಾಲೆಗೆ ಮೊಬೈಲ್​ ತಂದ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿದ ಮುಖ್ಯ ಶಿಕ್ಷಕಿ..!

Must read

ಮಂಡ್ಯ: ಶಾಲೆಗೆ ಮೊಬೈಲ್​ ತಂದ ವಿದ್ಯಾರ್ಥಿನಿಗೆ ಮುಖ್ಯಶಿಕ್ಷಕಿ ಬಟ್ಟೆ ಬಿಚ್ಚಿಸಿ ಶಿಕ್ಷೆ ಕೊಟ್ಟಿರುವ ಅಮಾನವೀಯ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ. ಒಂದು ವಾರದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಗಣಂಗೂರು ಪ್ರೌಢ ಶಾಲೆ ಮುಖ್ಯ ಶಿಕ್ಷಕಿ ಸ್ನೇಹಲತಾ,  ತರಗತಿಗೆ ಮೊಬೈಲ್ ತಂದಿದ್ದ ಎಂಟನೇ ತರಗತಿ ವಿದ್ಯಾರ್ಥಿನಿಯನ್ನು ಬೇರೆ ಕೊಠಡಿಗೆ ಕರೆದೊಯ್ದು ಬಟ್ಟೆ ಬಿಚ್ಚಿಸಿ ಅಮಾನವೀಯವಾಗಿ ನಡೆದುಕೊಂಡಿರುವ ಆರೋಪ ಕೇಳಿ ಬಂದಿದೆ.

ಮುಖ್ಯ ಶಿಕ್ಷಕಿಯ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ದೂರು ನೀಡಲು ವಿದ್ಯಾರ್ಥಿನಿ ಪೋಷಕರು ನಿರ್ಧರಿಸಿದ್ದಾರೆ.

ಈ ಬಗ್ಗೆ ಡಿಡಿಪಿಐ ಜವರೇಗೌಡ ಮಾತನಾಡಿದ್ದು, ಅವರು ಕ್ಲಾಸ್ ಒನ್ ಶಿಕ್ಷಕಿ ಆಗಿದ್ದಾರೆ. ಮೇಲ್ನೋಟಕ್ಕೆ ಪ್ರಕರಣ ತಪ್ಪು ಎಂದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಬರೆಯುತ್ತಿದ್ದೇವೆ ಎಂದಿದ್ದಾರೆ.

Latest article