Thursday, January 20, 2022

ದಯವಿಟ್ಟು ಥಿಯೇಟರ್‌ ಒಳಗೆ ಪಟಾಕಿ ಸಿಡಿಸಬೇಡಿ: ಅಭಿಮಾನಿಗಳಿಗೆ ಸಲ್ಮಾನ್​ ಮನವಿ

Must read

Salman appeals to fans ಮತ್ತು ಆಯುಷ್ ಶರ್ಮಾ ಚಿತ್ರ ‘ಆಂಟಿಮ್ ದಿ ಫೈನಲ್ ಟ್ರುತ್’ ನವೆಂಬರ್ 26 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಈ ಆಕ್ಷನ್-ಡ್ರಾಮಾ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ದೇಶದ ಬಹುತೇಕ ಎಲ್ಲಾ ಚಿತ್ರಮಂದಿರಗಳು ವಾರಾಂತ್ಯದಲ್ಲಿ ಹೌಸ್ ಫುಲ್ ಆಗುತ್ತಿವೆ. ಏತನ್ಮಧ್ಯೆ, ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದು ಕಾಣಿಸಿಕೊಂಡಿದೆ. ಇದರಲ್ಲಿ ಸಲ್ಮಾನ್ ಅಭಿಮಾನಿಗಳು ಥಿಯೇಟರ್‌ನಲ್ಲಿ ಪಟಾಕಿಗಳನ್ನು ಹಚ್ಚುವ ಮೂಲಕ ಸಂಭ್ರಮವನ್ನ ಆಚರಿಸುತ್ತಿದ್ದಾರೆ. ಈ ವಿಡಿಯೋವನ್ನು ಶೇರ್ ಮಾಡುವ ಮೂಲಕ ಸಲ್ಮಾನ್ ಅಭಿಮಾನಿಗಳಿಗೆ ಇಂತಹ ಅಪಾಯಕಾರಿ ಆಚರಣೆಗಳನ್ನು ಆಚರಿಸಬೇಡಿ ಎಂದು ಮನವಿ ಮಾಡಿದ್ದಾರೆ.

ಸಾಧ್ಯವಿರುವ ಎಲ್ಲ ರೀತಿಯಲ್ಲಿ ಚಲನಚಿತ್ರವನ್ನು ಆನಂದಿಸಿ, ಆದರೆ ದಯವಿಟ್ಟು ಹಾಗೆ ಮಾಡುವುದನ್ನು ತಪ್ಪಿಸಿ. ನನ್ನ ಎಲ್ಲಾ ಅಭಿಮಾನಿಗಳಿಗೆ ನಾನು ವಿನಂತಿಸುತ್ತೇನೆ ಎಂದಿದ್ದಾರೆ.

 

Latest article