Wednesday, May 18, 2022

ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆ: ಬಿ.ವೈ ವಿಜಯೇಂದ್ರ ಸ್ಪಷ್ಟನೆ

Must read

ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಉಪಚುನಾವಣೆ ಸೋಲಿನಿಂದ ಹತಾಶರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಸೋಮವಾರ ಹೇಳಿದರು.

ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣದ ತನಿಖೆಗೆ ಡಿಕೆಶಿ ಅವರು ಒತ್ತಾಯ ಮಾಡುತ್ತಿರುವ ಹಿನ್ನೆಲೆ ಮೈಸೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸೋಲಿನ ಹತಾಶೆಯಿಂದ ಸಂತೋಷ್ ವಿಚಾರವನ್ನ ರಾಜಕೀಯವಾಗಿ ಬಳಕೆ ಮಾಡುತ್ತಿದ್ದಾರೆ ಎಂದು ಡಿಕೆಶಿಗೆ ಟಾಂಗ್​ ಕೊಟ್ಟಿದ್ದಾರೆ.

ಸದ್ಯ ಆರ್​ಆರ್​ ನಗರ, ಶಿರಾ ಉಪಚುನಾವಣೆಯಲ್ಲಿ ಸೋತಿದ್ದಾರೆ. ಈ ರೀತಿಯ ವಿಚಾರಗಳನ್ನ ಹುಡುಕುತ್ತಾ ರಾಜಕಾರಣ ಮಾಡುತ್ತಿದ್ದಾರೆ. ಈಗಾಗಲೇ ಸಿಎಂ ಆಸ್ಪತ್ರೆಗೆ ಭೇಟಿ ನೀಡಿ ಸಂತೋಷ್ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ಸಿಎಂ ಬದಲಾವಣೆ ವಿಷಯದ ಕುರಿತು ಚರ್ಚೆ ಆಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇನ್ನೂ ಎರಡೂವರೆ ವರ್ಷ ಇದೇ ಪ್ರಶ್ನೆ ಕೇಳಿಕೊಂಡು ಇರ್ತಾರೆ. ಎರಡೂವರೆ ವರ್ಷ ಬಿಎಸ್​ವೈ ಸಿಎಂ ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನೀವು( ಬಿಎಸ್​ವೈ) ಸಿಎಂ ಆಗಲು ಕುರುಬ ಸಮುದಾಯದ ಕೊಡುಗೆ ಇದೆ ಎಂಬ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಈಗಾಗಲೇ ನಳಿಕ್​ ಕುಮಾರ್​ ಕಟೀಲ್​, ಸಿಎಂ ಸಮಾಲೋಚನೆ ಮಾಡಿದ್ದಾರೆ. ರಾಷ್ಟ್ರೀಯ ನಾಯಕರ ಜೊತೆಯೂ ಚರ್ಚೆ ಮಾಡಲಾಗಿದೆ. ಆದಷ್ಟು ಬೇಗ ಇದಕ್ಕೆ ಉತ್ತರ ಸಿಗಲಿದೆ. ಯಾರಿಗೂ ಅನ್ಯಾಯ ಆಗುವ ಪ್ರಶ್ನೆಯೇ ಇಲ್ಲ ಎಂದು ಮೈಸೂರಿನಲ್ಲಿ ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಅವರು ಪರೋಕ್ಷವಾಗಿ ಹೆಚ್​ ವಿಶ್ವನಾಥ್​ ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಸುಳಿವು ನೀಡಿದ್ದಾರೆ.

Latest article