ಮೈಸೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಒಕ್ಕಲಿಗರ ಮೀಸಲಾತಿ ವಿಚಾರ ಡೆಡ್ ಲೈನ್ ನೀಡಿರುವುದು ನನ್ನ ಗಮನಕ್ಕೆ ಬಂದಿಲ್ಲ ಅವರ ಲೆಟರ್ ನನ್ನ ಕೈ ಸೇರಲಿ ನಾನು ಮುಂದೆ ಏನು ಮಾಡಬೇಕೆಂದು ನಿರ್ಧಾರ ಮಾಡುತ್ತೀನಿ. ನಾನು ಎಲ್ಲಾ ಪಕ್ಷಗಳ ಹಿತ ಕಾಯಬೇಕಿದೆ, ಆ ಕಾರಣಕ್ಕೆ ನಾನು ಎಲ್ಲಾ ರೀತಿಯ ಆಲೋಚನೆ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಏಕರೂಪ ನಾಗರಿಕ ಸಂಹಿತೆ ಜಾರಿಗೆ ಕೇಂದ್ರದ ತಯಾರಿ ನಡೆಸಿದ್ದು ನನ್ನೊಂದಿಗೆ ಕೇಂದ್ರದಿಂದ ಯಾರೂ ಸಮಾಲೋಚನೆ ಮಾಡಿಲ್ಲ. ನಮ್ಮ ಪಕ್ಷದ 30 ವರ್ಷಗಳ ನಿಲುವು ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಬೇಕೆಂದು ಇದೆ, ಈ ಬಗ್ಗೆ ನಾನು ಸಹ ಎಲ್ಲಾ ರೀತಿಯ ಮಾಹಿತಿ ಕಲೆ ಹಾಕುತ್ತಿದ್ದೇನೆ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ತೇವೆ, ಇಂದು ಸಂಜೆ ದೆಹಲಿಗೆ ಹೋಗುತ್ತಿದ್ದೇನೆ 30 ರಂದು ಮಹಾರಾಷ್ಟ್ರ ಗಡಿ ವಿಚಾರ ತೀರ್ಪು ಬರುತ್ತಿದೆ. ಆ ತೀರ್ಪಿನ ಸಾಧಕಬಾಧಕಗಳ ಬಗ್ಗೆ ಚರ್ಚೆಯನ್ನ ನಡೆಸುತ್ತೇನೆ,ಅದರ ಜೊತೆಗೆ ಬೇರೆ ಬೇರೆ ವಿಚಾರಗಳು ಚರ್ಚೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.