Sunday, October 2, 2022

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ: ಬಿಜೆಪಿ ವಿರುದ್ಧ ಕಾಂಗ್ರೆಸ್​ ಕಾರ್ಯಕರ್ತರ ಪ್ರತಿಭಟನೆ

Must read

ಮೈಸೂರು: ನೆರೆಪೀಡಿತ ಪ್ರದೇಶಗಳ ಪರಿಶೀಲನೆಗೆ ತೆರಳಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಕೊಡಗಿನಲ್ಲಿ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ.

ಈ ಘಟನೆ ಖಂಡಿಸಿ ಮೈಸೂರಿನ ಟಿ.ನರಸೀಪುರದಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್​ ಕಾರ್ಯಕರ್ತರು, ಬಿಜೆಪಿ ಸರ್ಕಾರ ವಿರೋಧ ಪಕ್ಷದ ನಾಯಕರಿಗೆ ರಕ್ಷಣೆ ಕೊಡದ ಸರ್ಕಾರವಾಗಿದೆ. ಈ ಸರ್ಕಾರ ಪ್ರಯೋಜನವಿಲ್ಲದ ಸರ್ಕಾರ ಎಂದು ಆಕ್ರೋಶ ಹೊರಹಾಕಿದ್ದು, ಸುಮಾರು ಅರ್ಧ ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.

Latest article