Tuesday, May 17, 2022

ಜನತಾ ಜಲಧಾರೆ ಸಮಾರೋಪ ಕಾರ್ಯಕ್ರಮ: ಚಾಮುಂಡೇಶ್ವರಿ ದರ್ಶನ ಪಡೆದ ಕುಮಾರಸ್ವಾಮಿ

Must read

ಮೈಸೂರು: ಇಂದು ಜನತಾ ಜಲಧಾರೆ ಸಮಾರೋಪ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ.

ಈ ಹಿಂದೆ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಜಲಧಾರೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು. ಇಂದು ಕಾರ್ಯಕ್ರಮದ ಕೊನೆಯ ದಿನವಾದ ಕಾರಣ ಕುಮಾರಸ್ವಾಮಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಇಂದು ನಡೆಯುವ ಜನತಾ ಜಲಧಾರೆ ಕಾರ್ಯಕ್ರಮ ಯಶಸ್ವಿ ಆಗಲೆಂದು ಚಾಮುಂಡೇಶ್ವರಿ ತಾಯಿಗೆ ಬೇಡಿದ್ದೇನೆ. ತಾಯಿ ಅನುಗ್ರಹದಿಂದ ಸಮಾವೇಶ ಯಶಸ್ವಿ ಆಗುತ್ತದೆ. ನಮ್ಮ ಜೆಡಿಎಸ್ ಪಕ್ಷದ ಜನತಾ ಜಲಧಾರೆ ವಾಹನದ ಮೂಲಕ ನಾಡಿನ ನೀರಾವರಿ ಯೋಜನೆ ಹಾಗೂ ಜೆಡಿಎಸ್ ಪಕ್ಷದ ನೀರಾವರಿ ಯೋಜನೆಗಳ ಕನಸಿನ ಬಗ್ಗೆ ರಾಜ್ಯಾದ್ಯಂತ ಜನತೆಗೆ ತಿಳಿಸಲಾಗಿದೆ. ಜನತಾ ಜಲಧಾರೆ ಕಾರ್ಯಕ್ರಮ ಆರಂಭವಾದ ದಿನದಿಂದ ಈ ತನಕ ನಿರಂತರವಾಗಿ ಉತ್ತಮ ಮಳೆಯಾಗುತ್ತಿದೆ. ಇದು ಶುಭ ಸೂಚಕ ಎಂದರು.

ಇನ್ನು ಮುಂದಿನ ಚುನಾವಣಾ ಅಭ್ಯರ್ಥಿಗಳ ಬಗ್ಗೆ ಮಾತನಾಡಿದ ಅವರು, ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಪ್ರಕಟಿಸಬೇಕಷ್ಟೆ.  ಈ ಬಗ್ಗೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರೊಡನೆ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಈಗಾಗಲೇ ನಮ್ಮ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಚುನಾವಣಾ ಕೆಲಸ ಆರಂಭಿಸಿದ್ದಾರೆ. ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದಿದ್ದಾರೆ.

Latest article