ಕರಿಯಪ್ಪ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಬೇಕು ಎಂದು ಹೆಚ್ ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು ಹೇಳಿದ್ದಾರೆ. ಇತ್ತೀಚಿಗಷ್ಟೇ ನಡೆದಿದ್ದ ಸಾವಿನ ಪ್ರಕರಣದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳ ವಶದಲ್ಲಿದ್ದಾಗಲೇ ಕರಿಯಪ್ಪ ಎನ್ನುವವರು ಸಾವನ್ನಪ್ಪಿದ್ದು ಹೆಚ್ ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿರುವ ಎರಡನೇ ಪ್ರಕರಣ ಇದಾಗಿದೆ.
ಅರಣ್ಯ ಇಲಾಖೆ ಸಿಬ್ಬಂದಿಗಳ ವಶದಲ್ಲಿದ್ದಾಗಲೇ ಕರಿಯಪ್ಪ ಸಾವನ್ನಪ್ಪಿರುವುದಲ್ಲದೆ ಕರಿಯಪ್ಪನ ದೇಹದ ಮೇಲೂ ಗಾಯದ ಗುರುತುಗಳಿವೆ ಎನ್ನಲಾಗಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಮೃತನ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಜೊತೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದ್ದಾರೆ.