Friday, January 21, 2022

ಮೇಕೆದಾಟು ಪಾದಯಾತ್ರೆ ಒಂದು ಚುನಾವಣಾ ಗಿಮಿಕ್: ಸಚಿವ ಎಸ್.ಟಿ.ಸೋಮಶೇಖರ್

Must read

ಮೈಸೂರು: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ಗೆ ಮಾಡಲು ಏನು ಕೆಲಸ ಇಲ್ಲ. ಮೇಕೆದಾಟು ಪಾದಯಾತ್ರೆ ಒಂದು ಚುನಾವಣಾ ಗಿಮಿಕ್ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ವರ್ಷ ಅವರು ಏನು ಮಾಡಲಿಲ್ಲ. ಸಮ್ಮಿಶ್ರ ಸರ್ಕಾರ ಇದ್ದಾಗಲೂ ಯೋಜನೆ ಬಗ್ಗೆ ಮಾತನಾಡಲಿಲ್ಲ. ಈಗ ರಾಜಕೀಯ ಕಾರಣಕ್ಕೆ ಪಾದಯಾತ್ರೆ ಗಿಮಿಕ್ ಮಾಡುತ್ತಿದ್ದಾರೆ. ಇದು ಜನರಿಗೆ ಅರ್ಥವಾಗುತ್ತದೆ ಎಂದರು.

ಕೊರೊನಾ ಒಮೈಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿವೆ. ಬೇರೆ ರಾಜ್ಯಗಳಲ್ಲಿ ವಿದೇಶದಲ್ಲೂ ಪ್ರಕರಣ ಹೆಚ್ಚಾಗಿದೆ.
ಎರಡನೇ ಅಲೆಯಲ್ಲಿ ಸಾಕಷ್ಟು ಅನಾಹುತವಾಗಿದೆ. ಅದು ಮೂರನೇ ಅಲೆಯಲ್ಲಿ ಆಗಬಾರದು. ಕಾಂಗ್ರೆಸ್ ನಾಯಕರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಜನರ ಹಿತದೃಷ್ಟಿಯಿಂದ ಪಾದಯಾತ್ರೆ ಕೈ ಬಿಡಬೇಕು ಎಂದು ಮನವಿ ಮಾಡಿದರು.

Latest article