Thursday, January 20, 2022

ಕೊಳೆತ ಸ್ಥಿತಿಯಲ್ಲಿ ಗಂಡು ಹುಲಿಯ ಮೃತದೇಹ ಪತ್ತೆ..!

Must read

ಮೈಸೂರು: ಗುಂಡ್ರೆ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಗಂಡು ಹುಲಿಯ ಮೃತದೇಹ ಪತ್ತೆಯಾಗಿದೆ.

ಹೆಚ್​ಡಿ ಕೋಟೆ ತಾಲೂಕಿನ ಎನ್.ಬೇಗೂರು ಅರಣ್ಯದಲ್ಲಿ ಸುಮಾರು 7-8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಎಫ್‌ ಕರಿಕಾಳನ್‌ ಸೇರಿದಂತೆ ಇತರ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹದ ಸ್ಥಿತಿಗತಿ ಅವಲೋಕಿಸಿದ ಅಧಿಕಾರಿಗಳು ಹುಲಿಗಳ ಕಾದಾಟದಲ್ಲಿ ಗಾಯಗೊಂಡು ಸತ್ತಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಹುಲಿಯ ಮರಣೋತ್ತರ ಪರೀಕ್ಚೆ ನಡೆಸಿದ ಬಳಿಕ ಅಂತ್ಯಸಂಸ್ಕಾರ ಮಾಡಲು ಅರಣ್ಯ ಸಿಬ್ಬಂದಿ ಸಿದ್ಧತೆ ನಡೆಸಿದ್ದಾರೆ.

Latest article