ಮೈಸೂರು: ಜಿಲ್ಲೆಯಲ್ಲಿ ಮುಂಜಾನೆಯಿಂದಲೇ ವೈಕುಂಠ ಏಕಾದಶಿ ಪೂಜಾ ಕಾರ್ಯಗಳು ಆರಂಭವಾಗಿದ್ದು, ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆಗಳು ಸಂಪನ್ನಗೊಂಡಿದೆ.
ಕೊರೊನಾ ಹಿನ್ನೆಲೆಯಲ್ಲಿ ವೆಂಕಟೇಶ್ವರನ ದರ್ಶನಕ್ಕೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದ್ದು, ದೇವಾಲಯದ ಮುಂಭಾಗದಲ್ಲೇ ಪೂಜೆಗೆ ಅವಕಾಶ ನೀಡಲಾಗಿದೆ. ಮುಂಜಾನೆಯಿಂದಲೇ ಜಿಲ್ಲೆಯ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದು, ದೇವಾಲಯದ ಹೊರಗೆ ಪೂಜೆ ಸಲ್ಲಿಸಿದರೂ ಕೂಡ ವೆಂಕಟೇಶ್ವರನ ದರ್ಶನ ಸಿಗದೇ ಭಕ್ತರು ಬೇಸರ ವ್ಯಕ್ತಪಡಿಸಿದ್ದಾರೆ.
ಇನ್ನು ದೇವಾಲಯದಲ್ಲಿ ಪ್ರತಿ ವರ್ಷದಂತೆ ವಿಶೇಷ ಪೂಜಾ ವಿಧಿವಿಧಾನಗಳು ನಡೆಯುತ್ತಿದ್ದು, ಸೀಮಿತ ದೇವಸ್ಥಾನ ಸಿಬ್ಬಂದಿ ಹಾಗೂ ಟ್ರಸ್ಟಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.