Wednesday, May 18, 2022

ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿ ವಿರುದ್ಧ ಅಮೆರಿಕದ ಹಾಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ವಾಗ್ದಾಳಿ

Must read

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿ ಜೊ ಬೈಡನ್‌ ಗೆದ್ದರೆ ದೇಶದ ಘನತೆಗೆ ಧಕ್ಕೆ ಮತ್ತು ಅಪಾಯ ಎದುರಾಗಲಿದೆ ಎಂದು ಅಮೆರಿಕದ ಹಾಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಗುಡುಗಿದ್ದಾರೆ.

ಗುರುವಾರ ಟ್ರಂಪ್‌ ಅವರನ್ನು ರಿಪಬ್ಲಿಕನ್‌ ಪಕ್ಷವು ಅಧಿಕೃತವಾಗಿ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿಯನ್ನಾಗಿ ಪ್ರಕಟಿಸಿದ ವೇಳೆ ಶ್ವೇತ ಭವನದಲ್ಲಿ ಮಾತನಾಡಿದ ಅವರು, ಜೊ ಬೈಡನ್‌ ಈ ಚುನಾವಣೆಯಲ್ಲಿ ಗೆದ್ದರೆ ಅವರ ಆಡಳಿತದಲ್ಲಿ ಯಾರೂ ಸುರಕ್ಷಿತವಾಗಿರಲ್ಲ. ಅವರು ಅಮೆರಿಕದ ಘನತೆ ಮತ್ತು ಗೌರವವನ್ನು ಎತ್ತಿ ಹಿಡಿಯುವಂತಹ ವ್ಯಕ್ತಿತ್ವವಲ್ಲ. ಅವರು ಅಧಿಕಾರದ ಗದ್ದುಗೆ ಏರಿದರೆ ದೇಶದಲ್ಲಿ ನಿರುದ್ಯೋಗದ ಪರಿಸ್ಥಿತಿ ಸೃಷ್ಟಿಯಾಗಲಿದೆ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ಕೋವಿಡ್​ 19 ಬಗ್ಗೆ ಮಾತನಾಡಿದ ಅವರು, ಈ ವರ್ಷ ಮುಗಿಯುವಷ್ಟರಲ್ಲಿ ಅಥವಾ ಅದಕ್ಕೂ ಮುಂಚಿತವಾಗಿ ಲಸಿಕೆ ತಯಾರಿಸಲಿದ್ದೇವೆ. ಕೊರೊನಾ ವೈರಸ್ ಮತ್ತು ಸಾಂಕ್ರಾಮಿಕ ರೋಗದ ವಿರುದ್ಧ ಯಶಸ್ವಿಯಾಗಿ ಹೋರಾಡಿ ಹಿಂದೆದಿಗಿಂತಲೂ ಬಲವಾಗಿ ಹೊರಹೊಮ್ಮುತ್ತೇವೆ ಎಂದು ನುಡಿದರು.

ಸದ್ಯ 3 ಲಸಿಕೆಗಳು ಅಂತಿಮ ಹಂತದಲ್ಲಿವೆ. ಅವುಗಳನ್ನು ನಾವು ಮುಂಚಿತವಾಗಿ ಉತ್ಪಾದಿಸುತ್ತಿರುವುದರಿಂದ ಅನೇಕ ಡೋಸ್​ಗಳ ದೊರೆಯಲಿವೆ. ಈ ವರ್ಷ ಸುರಕ್ಷಿತ ಮತ್ತು ಪರಿಣಾಮಕಾರಿ ಲಸಿಕೆಯನ್ನು ಹೊಂದುತ್ತೇವೆ ಎಂದು ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ.

Latest article