Wednesday, June 29, 2022

ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ: ಪ್ರಧಾನಿ ಮೋದಿ

Must read

ಕೇಂದ್ರದ ಮೋದಿ ಸರ್ಕಾರದ ಮೇಲಿರುವ ಬಹುದೊಡ್ಡ ಆರೋಪಗಳಲ್ಲಿ ಮೊದಲನೆಯದು ನಿರುದ್ಯೋಗ ಸಮಸ್ಯೆ. ಅಧಿಕಾರಕ್ಕೆ ಬರುವ ಮೊದಲು 2 ಕೋಟಿ ಉದ್ಯೋಗ ಸೃಷ್ಠಿಸುವ ಮಾತುಗಳನ್ನ ಆಡಿದ್ದ ಸರ್ಕಾರ ನಂತರದ ದಿನಗಳಲ್ಲಿ ಈ ಭರವಸೆಯನ್ನು ಮರೆತಿತ್ತು. ಆದರೆ, ಲೋಕಸಭೆ ಚುನಾವಣೆಗೆ 2 ವರ್ಷ ಬಾಕಿ ಇರುವಂತೆ ಸರ್ಕಾರ ಉದ್ಯೋಗ ಕ್ಷೇತ್ರದತ್ತ ಗಮನ ಹರಿಸಲು ಸಜ್ಜಾಗಿದೆ.

ಮುಂದಿನ ಒಂದೂವರೆ ವರ್ಷದಲ್ಲಿ ಕೇಂದ್ರಸರ್ಕಾರ, 10 ಲಕ್ಷ ಜನರಿಗೆ ಉದ್ಯೋಗ ನೀಡಲಿದೆ ಎಂದು ಖುದ್ದು ಪ್ರಧಾನಿಗಳೆ ಘೋಷಿಸಿದ್ದಾರೆ. ಅವರು ಒದಗಿಸಿದ ಮಾಹಿತಿಯ ಪ್ರಕಾರ, ಒಂದೂವರೆ ವರ್ಷದಲ್ಲಿ ಕೇಂದ್ರ ಸರ್ಕಾರದ ಹಲವಾರು ಇಲಾಖೆಗಳಲ್ಲಿ 1.5 ಲಕ್ಷ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು. “ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿನ ಮಾನವ ಸಂಪನ್ಮೂಲವನ್ನು ಬಹಳ ನಿಕಟವಾಗಿ ಪರಿಶೀಲಿಸಿದ್ದಾರೆ. ವಿಮರ್ಶೆಯ ನಂತರ, ಅವರು ಮುಂದಿನ ಒಂದೂವರೆ ವರ್ಷಗಳಲ್ಲಿ ಮಿಷನ್ ಮೋಡ್ನಲ್ಲಿ ಕೆಲಸ ಮಾಡುವ 10 ಲಕ್ಷ ಜನರನ್ನು ನೇಮಿಸಿಕೊಳ್ಳಲು ನಿರ್ಧರಿಸಿದ್ದಾರೆ.

ಆದರೆ ಮತ್ತೊಂದು ಕಡೆ ಕಾಂಗ್ರೆಸ್​ ಪ್ರತಿ ವರ್ಷ 2 ಕೋಟಿ ಉದ್ಯೋಗಗಳನ್ನು ಒದಗಿಸುವ ಮೋದಿ ಸರ್ಕಾರದ ಘೋಷಣೆಯನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. ಕಾಂಗ್ರೆಸ್ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ಉದ್ಯೋಗ ವಿಷಯದಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿವೆ. ಕಳೆದ ಕೆಲವು ವರ್ಷಗಳಲ್ಲಿ ಲಕ್ಷಾಂತರ ಜನರು ತಮ್ಮ ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ. ನಿರುದ್ಯೋಗ ಹೆಚ್ಚುತ್ತಿದೆ. ಅಂತಹ ಪರಿಸ್ಥಿತಿಯಲ್ಲಿ, ಮೋದಿ ಸರ್ಕಾರವು ಈ ಘೋಷಣೆ ಮಾಡಿದೆ..

Latest article