ಬಸ್-ಕಾರು ನಡುವೆ ಭೀಕರ ಅಪಘಾತ: ಕಾರಿನಲ್ಲಿದ್ದ ಐವರು ಸಜೀವ ದಹನ

ಬಸ್-ಕಾರು ನಡುವೆ ಭೀಕರ ಅಪಘಾತ: ಕಾರಿನಲ್ಲಿದ್ದ ಐವರು ಸಜೀವ ದಹನ

ರಾಮ್​​ಗಢ​: ಬಸ್​ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವಾಹನಕ್ಕೆ ಬೆಂಕಿ ಹೊತ್ತಿಕೊಂಡು ಕಾರಿನಲ್ಲಿದ್ದ ಐವರು ಸಜೀವ ದಹನವಾಗಿರುವ ಘಟನೆ ಜಾರ್ಖಂಡ್‌ನ ರಾಮ್​​ಗಢ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ರಾಜ್​​ರಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಮುರಬಂದ್​ನ ರಾಷ್ಟ್ರೀಯ ಹೆದ್ದಾರಿ 23ರಲ್ಲಿ ದುರ್ಘಟನೆ ನಡೆದಿದೆ. ಮೃತರಲ್ಲಿ ಮೂವರು ಪುರುಷರು, ಇಬ್ಬರು ಮಹಿಳೆಯರು ಸೇರಿದ್ದಾರೆ. ಮೃತರೆಲ್ಲರೂ ಪುಣೆ ಮೂಲದವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಸ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

Related Stories

No stories found.
TV 5 Kannada
tv5kannada.com