ಉತ್ತರ ಪ್ರದೇಶದ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಇಂದು ಬೆಳ್ಳಂಬೆಳ್ಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಆಗ್ರಾದಿಂದ ನೋಯ್ಡಾ ಕಡೆ ವೇಗವಾಗಿ ತೆರಳುತ್ತಿದ್ದ ಬೋಲೇರೋ ಜೀಪ್ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಲಾರಿಗೆ ಹಿಂಬದಿಯಿಂಡ ಡಿಕ್ಕಿಯಾಗಿದೆ. ಘಟನೆಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.