Thursday, January 27, 2022

ಆಮ್ಲಜನಕ ಲಭ್ಯತೆ ಬಗ್ಗೆ ರಾಜ್ಯಗಳಿಗೆ ಕೇಂದ್ರ ಪತ್ರ..!

Must read

ದೇಶಾದ್ಯಂತ ಕೊರೊನಾ ಮೂರನೇ ಅಲೆ ಹಿನ್ನಲೆ, ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ, ರಾಜ್ಯಗಳು ಆಮ್ಲಜನಕದ ಲಭ್ಯತೆಯ ಬಗ್ಗೆ ಎಚ್ಚರಿಕೆ ವಹಿಸುವಂತೆ ಕೇಂದ್ರವು ರಾಜ್ಯಗಳಿಗೆ ಪತ್ರ ಬರೆದಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಆರೋಗ್ಯ ಸೌಲಭ್ಯಗಳಲ್ಲಿ ವೈದ್ಯಕೀಯ ಆಮ್ಲಜನಕದ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಎಲ್ಲಾ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ.

ಆರೋಗ್ಯ ಸೌಲಭ್ಯಗಳಲ್ಲಿ ವೈದ್ಯಕೀಯ ಆಮ್ಲಜನಕದ ಸೂಕ್ತ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಲು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

Latest article