ಗುಜರಾತ್ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 50,000 ಮತಗಳ ಅಂತರದಲ್ಲಿ ಗೆಲುವನ್ನು ಸಾಧಿಸಿದ್ದ ಭೂಪೇಂದ್ರ ಪಟೇಲ್ ಎರಡನೇ ಬಾರಿಗೆ ಸಿ.ಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇಂದು ಮಧ್ಯಾಹ್ನ 2 ಗಂಟೆಗೆ ಗಾಂಧಿನಗರದ ಬಳಿ ಸಿ.ಎಂ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಇನ್ನೂ ಭೂಪೇಂದ್ರರಿಗೆ ರಾಜ್ಯಪಾಲರಾದಂತಹ ಆಚಾರ್ಯ ದೇವ್ರತ್ ಪ್ರಮಾಣ ವಚನವನ್ನು ಭೋಧಿಸಲಿದ್ದಾರೆ. ಇನ್ನೂ ಗುಜರಾತ್ನ 18ನೇ ಸಿ.ಎಂ ಆಗಿ ಗದ್ದುಗೆಗೇರಿದ ಭೂಪೇಂದ್ರ ಪಟೇಲ್ ಜೊತೆ 20 ಸಚಿವರು ಕೂಡ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಈ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್, ಸಿ.ಎಂ. ಬೊಮ್ಮಾಯಿ ಹಾಗೂ ಮಾಜಿ ಸಿ.ಎಂ ಯಡಿಯೂರಪ್ಪ ಸೇರಿ ಹಲವು ನಾಯಕರು ಭಾಗಿಯಾಗಿಲಿದ್ದಾರೆ.