Thursday, January 20, 2022

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ಗೆ ಕೊರೊನಾ ಪಾಸಿಟಿವ್

Must read

ನವದೆಹಲಿ: ದೆಹಲಿಯಲ್ಲಿ ಕೋವಿಡ್‌ನಿಂದ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ ಎರಡು ದಿನಗಳ ಬಳಿಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ಗೆ ಕೊರೊನಾ ಸೋಂಕು ದೃಢಪಟ್ಟಿದೆ.

ದೆಹಲಿಯಲ್ಲಿ ಕೋವಿಡ್ 19 ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆಯಾದರೂ ಯಾರೂ ಭಯಪಡುವ ಅಗತ್ಯವಿಲ್ಲ. ಕೋವಿಡ್​ ಪ್ರಕರಣಗಳೆಲ್ಲ ಸೌಮ್ಯ ಮತ್ತು ಗಂಭೀರ ಲಕ್ಷಣರಹಿತವಾಗಿವೆ ಎಂದು ಕೇಜ್ರಿವಾಲ್ ಭಾನುವಾರ ಸ್ಪಷ್ಟಪಡಿಸಿದ್ದರು. ಇದಾದ ಎರಡು ದಿನಗಳ ಬಳಿಕ ಅಂದರೆ ಇಂದು ಮುಂಜಾನೆ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ಗೆ ಸೋಂಕು ತಗುಲಿರುವುದರ ಬಗ್ಗೆ ಟ್ವೀಟ್​ ಮಾಡಿದ್ದಾರೆ.

ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆ ನಾನು ಮನೆಯಲ್ಲಿ ಪರೀಕ್ಷೆ ಮಾಡಿಕೊಂಡಿದ್ದೇನೆ. ಪರೀಕ್ಷೆಯಲ್ಲಿ ಕೊರೊನಾ ಸೋಂಕು ಹರಡಿರುವುದು ದೃಢಪಟ್ಟಿದೆ ಎಂದು ಟ್ವೀಟ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇನ್ನು, ಕಳೆದ ಹಲವು ದಿನಗಳಿಂದ ನನ್ನ ಸಂಪರ್ಕಿತರು ಮೊದಲು ಕ್ವಾರೆಂಟೈನ್​ಗೊಳಪಟ್ಟು ಸ್ವಯಂ ಕೋವಿಡ್​ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

Latest article