ಯೋಗಿ ಆದೇಶಕ್ಕೆ ಹೈಕೋರ್ಟ್ ತಡೆ..!

ಡಾ. ಕಫೀಲ್‌ ಖಾನ್ ವಿರುದ್ಧದ ಅಮಾನತು ಆದೇಶಕ್ಕೆ ಅಲಹಾಬಾದ್‌ ಹೈಕೋರ್ಟ್‌ ತಡೆ ನೀಡಿದೆ.
ಯೋಗಿ ಆದೇಶಕ್ಕೆ ಹೈಕೋರ್ಟ್ ತಡೆ..!

ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಲವಂತವಾಗಿ ಚಿಕಿತ್ಸೆ ನೀಡಿದ ಆರೋಪದ ಮೇಲೆ ಉತ್ತರಪ್ರದೇಶ ಸರ್ಕಾರದಿಂದ ಅಮಾನತುಗೊಂಡಿದ್ದ ಮಕ್ಕಳ ತಜ್ಞ ಆರ್.ಕಫೀಲ್ ಅಹ್ಮದ್ ಖಾನ್, ಅಲಹಾಬಾದ್ ಹೈಕೋರ್ಟ್ ಸರ್ಕಾರದ ಅಮಾನತು ಆದೇಶಕ್ಕೆ ತಡೆ ನೀಡಿದ ನಂತರ ನೃತ್ಯ ಮಾಡುವ ಮೂಲಕ ಸಂಭ್ರಮಾಚರಿಸಿದರು.

ಪತ್ನಿ ಡಾ.ಶಬಿಸ್ತಾ ಖಾನ್ ಟ್ವಿಟರ್​ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಕಫೀಲ್ ಖಾನ್ ಸ್ಥಳೀಯ ನರ್ತಕಿಯೊಂದಿಗೆ ರಾಜಸ್ಥಾನಿ ಜಾನಪದ ಹಾಡಿಗೆ ನೃತ್ಯ ಮಾಡಿ ಸಂಭ್ರಮಿಸಿದ್ದಾರೆ. ಬಹ್ರೈಚ್ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಲವಂತವಾಗಿ ಚಿಕಿತ್ಸೆ ನೀಡಿದ ಮತ್ತು ಸರ್ಕಾರದ ನೀತಿಗಳನ್ನು ಟೀಕಿಸಿದ ಆರೋಪದ ಮೇಲೆ ಕಫೀಲ್ ಖಾನ್ ಅವರನ್ನು ಎರಡನೇ ಬಾರಿಗೆ ಅಮಾನತುಗೊಳಿಸಿ ಉತ್ತರ ಪ್ರದೇಶ ಸರ್ಕಾರ 2019ರಲ್ಲಿ ಆದೇಶಿಸಿತ್ತು. ಈ ಆದೇಶಕ್ಕೆ ಅಲಹಾಬಾದ್ ಹೈಕೋರ್ಟ್ ಮಂಗಳವಾರ ತಡೆ ನೀಡಿತು.

ಗೋರಖ್ ಪುರದ BRD ವೈದ್ಯಕೀಯ ಕಾಲೇಜಿನಲ್ಲಿ ಸಂಭವಿಸಿದ ದುರಂತದ ನಂತರ ಕಫೀಲ್ ಖಾನ್ ಅವರನ್ನು ಈ ಹಿಂದೆ ಅಮಾನತುಗೊಳಿಸಲಾಗಿತ್ತು. ಆಗಸ್ಟ್ 2017ರಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಸುಮಾರು 60 ಮಕ್ಕಳು ಈ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇದರ ಹೊಣೆಯನ್ನ ಆಸ್ಪತ್ರೆಯ ಮಕ್ಕಳ ತಜ್ಞ ಕಫೀಲ್ ಖಾನ್ ಮೇಲೆ ಹೊರಿಸಿ ಅವರನ್ನು ಅಮಾನತು ಮಾಡಲಾಗಿತ್ತು..

Related Stories

No stories found.
TV 5 Kannada
tv5kannada.com