Monday, November 29, 2021

ಈಶಾನ್ಯ ರಾಜ್ಯಗಳಲ್ಲಿ ಕಾಂಗ್ರೆಸ್ ಮುಗಿಸಲು ದೀದಿ ಯೋಜನೆ..!

Must read

ಮೇಘಾಲಯದಲ್ಲಿ ರಾತ್ರೋರಾತ್ರಿ ಕಾಂಗ್ರೆಸ್​ನ 12 ಶಾಸಕರು ಕಾಂಗ್ರೆಸ್​ ತೊರೆದು ತೃಣಮೂಲ ಕಾಂಗ್ರೆಸ್ ಸೇರ್ಪಡೆಗೊಂಡು ಪಕ್ಷಕ್ಕೆ ಮರ್ಮಾಘಾತ ನೀಡಿದ ಬೆನ್ನಲ್ಲೆ ಕಾಂಗ್ರೆಸ್​ ಕೋಪಗೊಂಡಿದೆ. ಈ ಬಗ್ಗೆ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಮಾತನಾಡಿ, ಮಮತಾ ವಿರುದ್ಧ ವಾಗ್ಧಾಳಿ ನಡೆಸಿದರು.

ಮೇಘಾಲಯದಲ್ಲಿ ಮಾತ್ರವಲ್ಲದೆ, ಇತರ ಈಶಾನ್ಯ ರಾಜ್ಯಗಳಲ್ಲೂ ಟಿಎಂಸಿಯ ಪಿತೂರಿ ನಡೆಯುತ್ತಿದೆ. ಈಶಾನ್ಯ ರಾಜ್ಯಗಳಲ್ಲಿ ಕಾಂಗ್ರೆಸ್​ ಮುಗಿಸುವ ಹುನ್ನಾರವನನ್ನು ಟಿಎಮ್​ಸಿ ಮಾಡಿದೆ ಎಂದು ಅವರು ಹೇಳಿದರು.

ಮೇಘಾಲಯದಲ್ಲಿ 12 ಕಾಂಗ್ರೆಸ್ ಶಾಸಕರು ಟಿಎಂಸಿ ಸೇರುವ ವಿಷಯಕ್ಕೆ ಸಂಬಂಧಿಸಿದಂತೆ ಅಧೀರ್ ರಂಜನ್ ಚೌಧರಿ ಮಾತನಾಡಿ, ಕಾಂಗ್ರೆಸ್ ಅನ್ನು ಒಡೆಯುವ ಈ ಪಿತೂರಿ ಮೇಘಾಲಯದಲ್ಲಿ ಮಾತ್ರವಲ್ಲದೆ ಈಶಾನ್ಯ ರಾಜ್ಯದಾದ್ಯಂತ ನಡೆಯುತ್ತಿದೆ. ನಾನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಮೊದಲು ಟಿ.ಎಂ.ಸಿ. ಚುನಾವಣಾ ಚಿಹ್ನೆಯಲ್ಲಿ ಆಯ್ಕೆ ಮಾಡಿ ನಂತರ ಔಪಚಾರಿಕವಾಗಿ ಅವರ ಪಕ್ಷಕ್ಕೆ ಸ್ವಾಗತಿಸುವಂತೆ ಸವಾಲು ಹಾಕುತ್ತೇನೆ ಎಂದರು..

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜಧಾನಿ ದೆಹಲಿಯಲ್ಲಿದ್ದರೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿಲ್ಲ. ಸೋನಿಯಾ ಗಾಂಧಿ ಅವರನ್ನು ಮಮತಾ ಭೇಟಿ ಮಾಡದಿರುವ ಪ್ರಶ್ನೆಗೆ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ  ಪ್ರಧಾನಿ ನರೇಂದ್ರ ದೀದಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾದರೆ ಕೋಪಗೊಳ್ಳುತ್ತಾರೆ ಎಂದು ಹೇಳಿದರು.

Latest article