ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಭಾರೀ ಬಹುಮತದಿಂದ ಜಯ ಸಾಧಿಸಿರುವ ದ್ರೌಪದಿ ಮುರ್ಮು ಅವರು ದೇಶದ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇಂದು ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾರತದ ಮುಖ್ಯ ನ್ಯಾಯಾಧೀಶ ಎನ್.ವಿ. ರಮಣ ಅವರು ದ್ರೌಪದಿ ಮುರ್ಮು ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಬಳಿಕ 21 ಕುಶಾಲತೋಪುಗಳನ್ನು ಹಾರಿಸಿ ದ್ರೌಪದಿ ಅವರಿಗೆ ಗನ್ ಸಲ್ಯೂಟ್ ಗೌರವ ನೀಡಲಾಗಿದೆ.
ದೇಶದ ನೂತನ ರಾಷ್ಟ್ರಪತಿಯಾಗಿರುವ 64 ವರ್ಷದ ದ್ರೌಪದಿ ಮುರ್ಮು ಅವರು ದೇಶದ ಮೊದಲ ಆದಿವಾಸಿ ರಾಷ್ಟ್ರಪತಿ, 2ನೇ ಮಹಿಳಾ ರಾಷ್ಟ್ರಪತಿ ಹಾಗೂ ಅತಿ ಕಿರಿಯ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.