ದೆಹಲಿಯಲ್ಲಿ ಈ ವರ್ಷವೂ ದೀಪಾವಳಿ ಹಬ್ಬಕ್ಕೆ ಪಟಾಕಿ ನಿಷೇಧ

ದೆಹಲಿಯಲ್ಲಿ ಈ ವರ್ಷವೂ ದೀಪಾವಳಿ ಹಬ್ಬಕ್ಕೆ ಪಟಾಕಿ ನಿಷೇಧ
ADMIN

ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾದ ಹಿನ್ನೆಲೆ, ಈ ಬಾರಿ ದೀಪಾವಳಿ ಹಬ್ಬಕ್ಕೆ ಪಟಾಕಿ ಬಳಕೆ ನಿಷೇಧಿಸಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಆದೇಶ ಹೊರಡಿಸಿದ್ದಾರೆ.

ಇದರಿಂದ ರಾಜಧಾನಿಯ ನಿವಾಸಿಗಳಿಗೆ ಈ ವರ್ಷವೂ ದೀಪಾವಳಿ ಸಂಭ್ರಮ ಕೊಂಚ ದೂರವಾಗಿದೆ. ದೆಹಲಿಯಲ್ಲಿ ವಾಯುಮಾಲಿನ್ಯ ಗಮನದಲ್ಲಿಟ್ಟುಕೊಂಡು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಹಚ್ಚುವುದಕ್ಕೆ ನಿಷೇಧ ಹೇರಲಾಗಿದೆ. ಕಳೆದ ವರ್ಷದಂತೆಯೇ ಈ ವರ್ಷವೂ ಪಟಾಕಿ ಶೇಖರಣೆ, ಮಾರಾಟ ಹಾಗೂ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪಟಾಕಿ ನಿಷೇಧಿಸುವ ಕಾರಣ ಸಂಗ್ರಹ ಮಾಡಬೇಡಿ ಎಂದು ಟ್ವಿಟರ್​ನಲ್ಲಿ ವ್ಯಾಪಾರಿಗಳಿಗೆ ಮನವಿ ಮಾಡಿದ್ದಾರೆ.

ಇನ್ನು ದೆಹಲಿಯಲ್ಲಿ ವಾಯುಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿರುವ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಪಟಾಕಿ ಸಿಡಿಸುವುದಕ್ಕೆ ಸರ್ಕಾರ ಸಂಪೂರ್ಣ ಬ್ರೇಕ್​ ಹಾಕಿದ್ದು, ಈ ವರ್ಷವೂ ಕೂಡ ನಿಷೇಧ ಹೇರಲಾಗಿದೆ.

Related Stories

No stories found.
TV 5 Kannada
tv5kannada.com