Sunday, October 2, 2022

ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

Must read

ನವದೆಹಲಿ: ನವದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ್ದಾರೆ.

ಬೆಳಗ್ಗೆ 7 ಗಂಟೆ ಸುಮಾರಿಗೆ ರಾಜ್​ ಘಾಟ್​​ಗೆ ಆಗಮಿಸಿದ ನರೇಂದ್ರ ಮೋದಿ,  ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದರು. ಬಳಿಕ ಕೆಂಪುಕೋಟೆಯಲ್ಲಿ ಗಾರ್ಡ್​ ಆಫ್​ ಹಾನರ್​ ಪಡೆದು ಧ್ವಜಾರೋಹಣ ನೆರವೇರಿಸಿದ್ದಾರೆ.

ಇನ್ನು ದೇಶದೆಲ್ಲಡೆ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ಬಾರಿ ಹರ್ ಘರ್ ತಿರಂಗಾ ಅಭಿಯಾನ ಮೂಲಕ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಗಿದೆ.

 

Latest article