ದೇಶದಲ್ಲಿ ಒಂದೇ ದಿನ 25,404 ಮಂದಿಗೆ ಕೊರೊನಾ ಸೋಂಕು

ಕಳೆದ 24 ಗಂಟೆಗಳಲ್ಲಿ 37,127 ಸೋಂಕಿತರು ಗುಣಮುಖ
ದೇಶದಲ್ಲಿ ಒಂದೇ ದಿನ 25,404  ಮಂದಿಗೆ ಕೊರೊನಾ ಸೋಂಕು

ನವದೆಹಲಿ: ದೇಶದಾದ್ಯಂತ ಕೊರೊನಾ ಸೋಂಕು ಹರಡುವಿಕೆಯಲ್ಲಿ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 25,404 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಒಂದೇ ದಿನ 339 ಸೋಂಕಿತರು ಸಾವನ್ನಪ್ಪಿದ್ದು, 37,127 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.

ಇನ್ನು ದೇಶದಲ್ಲಿ ಈವೆರೆಗೆ ಒಟ್ಟು 3,32,89,579 ಜನರಿಗೆ ಕೊರೊನಾ ಸೋಂಕು ತಗಲಿದ್ದು, ಈ ಪೈಕಿ 4,43,213 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 3,62,207 ಸಕ್ರೀಯ ಪ್ರಕರಣಗಳಿದ್ದು 3,24,84,159 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.

Related Stories

No stories found.
TV 5 Kannada
tv5kannada.com