Monday, January 24, 2022

ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ: ಒರ್ವ ಸಾವು..80 ಮಂದಿಗೆ ಗಾಯ

Must read

ಪೊಂಗಲ್​ ಹಬ್ಬದ ಹಿನ್ನಲೆಯಲ್ಲಿ ತಮಿಳುನಾಡಿನಲ್ಲಿ ಆಯೋಜಿಸಿದ್ದ ಜೆಲ್ಲಿಕಟ್ಟು ಸ್ಪರ್ಧೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದು, ತಮಿಳುನಾಡಿನ ಮಧುರೈನ ಅವನಿಯಪುರಂ ಪ್ರದೇಶದಲ್ಲಿ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಒಬ್ಬರು ಗಾಯಗೊಂಡು ಸಾವನ್ನಪ್ಪಿದ್ದಾರೆ ಮತ್ತು 80 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನು ಗಾಯಗೊಂಡವರಲ್ಲಿ 38 ಮಂದಿ ಗೂಳಿ ಪಳಗಿಸುವವರಾಗಿದ್ದು, 24 ಮಂದಿ ಗೂಳಿ ಮಾಲೀಕರು ಮತ್ತು 18 ಪ್ರೇಕ್ಷಕರಿದ್ದರು ಎನ್ನಲಾಗಿದೆ.

ಕೊರೊನಾ ನಿಯಮಗಳನ್ನು ಅನುಸರಿಸಿ ಜೆಲ್ಲಿಕಟ್ಟು ಸ್ಪರ್ಧೆ ಆಯೋಜನೆ ಮಾಡಲಾಗಿದ್ದು, 300 ಗೂಳಿಗಳನ್ನು ಓಡಿಸಲು ಹಾಗೂ 150 ಜನ ಪ್ರೇಕ್ಷಕರಿಗಷ್ಟೇ ಅವಕಾಶ ನೀಡಲಾಗಿತ್ತು.

Latest article