Tuesday, May 17, 2022

ಲಖಿಂಪುರ್ ಹಿಂಸಾಚಾರ: ಮೃತರ ಕುಟುಂಬಕ್ಕೆ ₹50 ಲಕ್ಷ ಪರಿಹಾರ

Must read

ಲಖನೌ: ಲಖಿಂಪುರ್ ಹಿಂಸಚಾರದಲ್ಲಿ ಸಾವನ್ನಪ್ಪಿದ ಮೃತ ಪಟ್ಟ ರೈತರ ಕುಟುಂಬಕ್ಕೆ ಛತ್ತೀಸ್‌ಘಡ್ ಹಾಗೂ ಪಂಜಾಬ್ ಸರ್ಕಾರ ಪ್ರತ್ಯೇಕವಾಗಿ 50 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ.

ಇಂದು ಉತ್ತರ ಪ್ರದೇಶ ಸರ್ಕಾರ ಕಾಂಗ್ರೆಸ್ ನಾಯಕರಿಗೆ ಲಖೀಂಪುರ್ ಖೇರಿಗೆ ಭೇಟಿ ನೀಡಲು ಅನುಮತಿ ನೀಡಿತ್ತು. ಈ ಹಿನ್ನೆಲೆ ರಾಹುಲ್ ಗಾಂಧಿ ಸೇರಿದಂತೆ ಕೈ ನಿಯೋಗ ಲಖಿಂಪುರ್ ಖೇರಿಗೆ ಭೇಟಿ ನೀಡಲು ಲಖನೌ ಏರ್​ಪೋರ್ಟ್​ಗೆ ಆಗಮಿಸಿದ್ದರು. ಈ ವೇಳೆ ಕೈ ನಾಯಕರನ್ನು ವಿಮಾನ ನಿಲ್ದಾಣದಲ್ಲಿದ್ದ ಭದ್ರತಾ ಸಿಬ್ಬಂದಿ ತಡೆದಿದ್ದರು.

ಭದ್ರತಾ ಸಿಬ್ಬಂದಿ ಏರ್​ಪೋರ್ಟ್​ನಲ್ಲಿ ತಡೆಹಿಡಿದಿದ್ದರಿಂದ ಕೆಲಕಾಲ ಏರ್​ಪೋರ್ಟ್​ನಲ್ಲಿ ಕಾಂಗ್ರೆಸ್​ ನಾಯಕರು ಪ್ರತಿಭಟನೆಯನ್ನು ನಡೆಸಿದರು. ಈ ವೇಳೆ ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚನ್ನಿ ಮತ್ತು ಛತ್ತೀಸ್‌ಘಡ್ ಸಿಎಂ ಭೂಪೇಶ್ ಬಘೇಲ್ ಮೃತಪಟ್ಟವರ ಕುಟುಂಬಕ್ಕೆ 50 ಲಕ್ಷ ಹಾಗೂ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಪತ್ರಕರ್ತನಿಗೆ 50 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದರು.

ಈ ವೇಳೆ ಮಾತನಾಡಿದ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ, ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣ ತಮಗೆ 1919ರ ಜಲಿಯನ್ ವಾಲಾಬಾಗ್ ಹತ್ಯಾಕಾಂಡವನ್ನು ನೆನಪಿಸಿತು ಎಂದು ಹೇಳಿದ್ರು. ಇನ್ನು ರಾಹುಲ್​ ಗಾಂಧಿಗೆ ಕೆಸಿ ವೇಣುಗೋಪಾಲ್, ರಣದೀಪ್ ಸುರ್ಜೆವಾಲಾ, ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚನ್ನಿ ಮತ್ತು ಛತ್ತೀಸ್ ಘಡ ಸಿಎಂ ಭೂಪೇಶ್ ಬಘೇಲ್ ಸಾಥ್​ ನೀಡಿದರು.

Latest article