Thursday, January 20, 2022

ಖ್ಯಾತ ಗಾಯಕಿ ಲತಾ ಮಂಗೇಶ್ಕರ್​​ಗೆ ಕೊರೊನಾ ಪಾಸಿಟಿವ್​​: ICUನಲ್ಲಿ ಚಿಕಿತ್ಸೆ

Must read

ಖ್ಯಾತ ಗಾಯಕಿ ಲತಾ ಮಂಗೇಶ್ಕರ್​​ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಲತಾ ಮಂಗೇಶ್ಕರ್​​ ಅವರಿಗೆ ಕೊರೊನಾ ಸೋಂಕಿನ ಜೊತೆ ಇತರ ಆರೋಗ್ಯ ಸಮಸ್ಯೆಗಳಿದ್ದು, ಸದ್ಯ ವೈದ್ಯರು ಅವರ ಆರೋಗ್ಯದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಬ್ರೀಚ್ ಕ್ಯಾಂಡಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಭಾರತದ ನೈಟಿಂಗೇಲ್ ಎಂದೂ ಸಹ ಗೌರವಿಸಲ್ಪಡುವ ಲತಾ ಮಂಗೇಶ್ಕರ್ ಅವರು ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ಕುಟುಂಬಸ್ಥರೊಡನೆ ತಮ್ಮ 92ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು.

Latest article