Tuesday, August 16, 2022

ಮೇಕೆದಾಟು ಯೋಜನೆ: ಇಂದು ಸುಪ್ರೀಂಕೋರ್ಟ್​ನಲ್ಲಿ ತಮಿಳುನಾಡು ಅರ್ಜಿ ವಿಚಾರಣೆ

Must read

ಬೆಂಗಳೂರು: ಮೇಕೆದಾಟು ಯೋಜನೆ ಸಂಬಂಧ ಇಂದು ಸುಪ್ರೀಂಕೋರ್ಟ್​ನಲ್ಲಿ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ.

ಮೇಕೆದಾಟು ಯೋಜನೆಗೆ ಅವಕಾಶ ಕೊಡಬಾರದು ಎಂದು ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ಇಂದು ಮಹತ್ತರ ವಿಚಾರಣೆ ನಡೆಯಲಿದೆ.

ಮೇಕೆದಾಟು ಯೋಜನೆ ಬಗ್ಗೆ ನಿರ್ಣಯ ಕೈಗೊಳ್ಳುವ ಅಧಿಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಇಲ್ಲ. ಕೇವಲ ನೀರು ಹಂಚಿಕೆಯಷ್ಟೇ ಪ್ರಾಧಿಕಾರದ ಕೆಲಸ. ಹೀಗಾಗಿ ಕರ್ನಾಟಕಕ್ಕೆ ಯೋಜನೆಗೆ ಅವಕಾಶ ನೀಡಬೇಡಿ ಎಂದು ಮೇಲ್ಮನವಿ ಸಲ್ಲಿಸಿದ್ದ ತಮಿಳುನಾಡು ಸರ್ಕಾರ ತುರ್ತು ವಿಚಾರಣೆಗೆ ಮನವಿ‌ ಮಾಡಿದ್ದು, ಇಂದು  ಅರ್ಜಿಯ ಬಗ್ಗೆ ವಿಚಾರಣೆ ನಡೆಯಲಿದೆ.

Latest article