Tuesday, August 16, 2022

ಭದ್ರತಾ ಲೋಪ: ಪಂಜಾಬ್​​ನಲ್ಲಿ ಪ್ರಧಾನಿ ಮೋದಿ ರ್ಯಾಲಿ ರದ್ದು..!

Must read

ಭದ್ರತಾ ಲೋಪಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನ ಫಿರೋಜ್‌ಪುರದಲ್ಲಿ ಹಮ್ಮಿಕೊಂಡಿದ್ದ ರ್ಯಾಲಿ ರದ್ದು ಮಾಡಿದ್ದಾರೆ ಎಂದು ಗೃಹ ಸಚಿವಾಲಯದ ಹೇಳಿಕೆ ತಿಳಿಸಿದೆ.

ಹುಸೇನಿವಾಲಾದಲ್ಲಿನ ರಾಷ್ಟ್ರೀಯ ಹುತಾತ್ಮರ ಸ್ಮಾರಕದಿಂದ ಸುಮಾರು 30-ಕಿಮೀ ದೂರದಲ್ಲಿ, ಪ್ರಧಾನ ಮಂತ್ರಿಯ ಬೆಂಗಾವಲು ಪಡೆ ಫ್ಲೈಓವರ್ ಅನ್ನು ತಲುಪಿದಾಗ, ಕೆಲವು ಪ್ರತಿಭಟನಾಕಾರರು ರಸ್ತೆಯಲ್ಲಿ ಮುತ್ತಿಗೆ ಹಾಕಿರುವುದು ಕಂಡುಬಂದಿದೆ. ಇದು ಪ್ರಧಾನಿಯವರ ಭದ್ರತೆಯಲ್ಲಿ ದೊಡ್ಡ ಲೋಪವಾಗಿದೆ ಎಂದು ತಿಳಿಸಲಾಗಿದೆ.

Latest article