Thursday, January 20, 2022

ಕನ್ನಡದಲ್ಲಿ ಸಂಕ್ರಾಂತಿ ಶುಭಾಶಯ ತಿಳಿಸಿದ ಮೋದಿ: ಕೇಂದ್ರದಿಂದ ಮತ್ತೊಂದು ಗುಡ್​ನ್ಯೂಸ್​..!

Must read

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಡಿದ ಸಮಸ್ತ ಜನತೆಗೆ ಕನ್ನಡದಲ್ಲಿ ಸಂಕ್ರಾತಿಯ ಶುಭಾಶಯ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, ರಾಷ್ಟ್ರದ ಪ್ರಗತಿಗೆ ಅಭೂತಪೂರ್ವ ಕೊಡುಗೆ ನೀಡುತ್ತಿರುವ ಕರ್ನಾಟಕದ ನನ್ನ ಸಹೋದರರು ಮತ್ತು ಸಹೋದರಿಯರಿಗೆ ಮಕರ ಸಂಕ್ರಾಂತಿಯ ಶುಭಾಶಯಗಳು.ರಾಜ್ಯದ ಜನರ ಸಬಲೀಕರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸದಾ ಶ್ರಮಿಸಲಿವೆ ಎಂದು ಭರವಸೆ ನೀಡಿದ್ದಾರೆ.

ಇನ್ನು ಕೇಂದ್ರದಿಂದ ಪ್ರಧಾನಿ ಗ್ರಾಮೀಣ ಅವಾಸ್ ಯೋಜನೆಯಡಿ ರಾಜ್ಯಕ್ಕೆ 18,78,671 ಮನೆಗಳನ್ನು ಘೋಷಣೆ ಮಾಡಿದೆ. ವಸತಿ ಹಾಗೂ ನಿವೇಶನ ರಹಿತರಿಗಾಗಿ ಮನೆಗಳ ಕೊಡುಗೆ ನೀಡಿರುವ ಕೇಂದ್ರಕ್ಕೆ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ.

Latest article