Wednesday, June 29, 2022

ಪಂಜಾಬ್​ ಕಾಂಗ್ರೆಸ್​ ನಾಯಕ ನವಜೋತ್​ ಸಿಧುಗೆ ಒಂದು ವರ್ಷ ಜೈಲು..!

Must read

ಪಂಜಾಬ್​ ಕಾಂಗ್ರೆಸ್​ ನಾಯಕ ನವಜೋತ್​ ಸಿಧುಗೆ ಸುಪ್ರೀಂ ಕೋರ್ಟ್ ಒಂದು ವರ್ಷ ಜೈಲು ವಿಧಿಸಿದೆ.

1988ರಲ್ಲಿ ನಡೆದ ಘಟನೆಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ನವಜೋತ್​ ಸಿಧು ಅಪರಾಧಿ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಸಾವಿರ ರೂಪಾಯಿ ದಂಡ ವಿಧಿಸಿದೆ.

1988ರಲ್ಲಿ ನಡೆದ ರಸ್ತೆ ಕಲಹದಲ್ಲಿ ಪಟಿಯಾಲದ ನಿವಾಸಿ ಗುರ್ನಾಮ್ ಸಿಂಗ್ ಎಂಬುವವರ ತಲೆಗೆ ನವಜೋತ್​ ಸಿಧು ಹೊಡೆದಿರುವ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ 2018ರ ಮೇ ತಿಂಗಳಲ್ಲಿ ಸಿಧು ಅವರನ್ನು ದೋಷಮುಕ್ತಗೊಳಿಸಿ ನೀಡಿದ್ದ ತನ್ನ ಆದೇಶವನ್ನು ಮರು ಪರಿಶೀಲನೆ ನಡೆಸಿದ ಸುಪ್ರೀಂಕೋರ್ಟ್, ಇಂದು ಪರಿಷ್ಕೃತ ತೀರ್ಪು ನೀಡಿದೆ.

Latest article