ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಒಡಿಶಾ ಮೂಲದ ಬುಡಕಟ್ಟು ಜನಾಂಗ ಮಹಿಳೆ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ.
ಮಂಗಳವಾರ ಸಂಜೆ ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ ಮುರ್ಮು ಅವರ ಆಯ್ಕೆಯನ್ನು ಅಂತಿಮಗೊಳಿಸಲಾಗಿದೆ.
ಕಾರ್ಪೊರೇಟರ್ ಆಗಿ ರಾಜಕೀಯ ಜೀವನಕ್ಕೆ ಕಾಲಿರಿಸಿದ ಮುರ್ಮು ಅವರು ಎರಡು ಬಾರಿ ಶಾಸಕರಾಗಿದ್ದಾರೆ. ಜಾರ್ಖಂಡ್ ರಾಜ್ಯಪಾಲರಾಗಿದ್ದ ಅವರು 2013ರಲ್ಲಿ ಬಿಜೆಪಿಯ ಎಸ್ಟಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸದಸ್ಯೆಯಾಗಿದ್ದರು.
ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಹುದ್ದೆ ಅಲಂಕರಿಸಿದಲ್ಲಿ, ಈ ಹುದ್ದೆಗೇರಿದ ದೇಶದ ಮೊದಲ ಬುಡಕಟ್ಟು ಮಹಿಳೆ ಎನಿಸಿಕೊಳ್ಳಲಿದ್ದಾರೆ.