Thursday, January 20, 2022

ಕೋವಿಡ್ ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ಫೋಟೋ ಔಟ್..!

Must read

ಕೇಂದ್ರ ಆರೋಗ್ಯ ಸಚಿವಾಲಯ ಕೋ-ವಿನ್​ ಫ್ಲ್ಯಾಟ್‌ಫಾರ್ಮ್‌ಗೆ ಒಂದಷ್ಟು ಫಿಲ್ಟರ್‌ಗಳನ್ನು ಹೇರಿದ್ದು, ಐದು ಚುನಾವಣೆಗೆ ಒಳಪಡುವ 5 ರಾಜ್ಯಗಳಲ್ಲಿ ನೀಡಲಾಗುವ ಲಸಿಕೆ ಪ್ರಮಾಣಪತ್ರಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋವನ್ನು ತೆಗೆದುಹಾಕಲಾಗಿದೆ. ಭಾರತದ ಚುನಾವಣಾ ಆಯೋಗದ ಘೋಷಣೆಯ ನಂತರ ಉತ್ತರ ಪ್ರದೇಶ ಮತ್ತು ಪಂಜಾಬ್ ಸೇರಿದಂತೆ ಐದು ರಾಜ್ಯಗಳಲ್ಲಿ ಶನಿವಾರದಂದು ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ.

ಲಸಿಕೆ ಪ್ರಮಾಣಪತ್ರದಿಂದ ಮೋದಿ ಹೆಸರು ಮತ್ತು ಫೋಟೋವನ್ನು ಹೊರಗಿಡಲು ಶನಿವಾರ ರಾತ್ರಿಯೇ ಅಗತ್ಯ ಫಿಲ್ಟರ್‌ಗಳನ್ನು ಅನ್ವಯಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಚುನಾವಣಾ ಸಮಿತಿಯು ಶನಿವಾರ ಮಾಧ್ಯಮಗಳನ್ನು ಉದ್ದೇಶಿಸಿ ಉತ್ತರ ಪ್ರದೇಶ, ಉತ್ತರಾಖಂಡ್​, ಪಂಜಾಬ್, ಮಣಿಪುರ ಮತ್ತು ಗೋವಾ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿತ್ತು. ಫೆಬ್ರವರಿ 10 ರಿಂದ ಮಾರ್ಚ್ 7ರ ನಡುವೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಮತಎಣಿಕೆ ನಡೆಯಲಿದೆ.

ಸರ್ಕಾರಗಳು, ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳಿಗೆ ಮಾದರಿ ನೀತಿ ಸಂಹಿತೆ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ ತಕ್ಷಣ ಜಾರಿಗೆ ಬರುತ್ತದೆ ಮತ್ತು ಚುನಾವಣೆಗಳು ಪೂರ್ಣಗೊಳ್ಳುವವರೆಗೆ ಜಾರಿಯಲ್ಲಿರುತ್ತದೆ. ‘ಮಾದರಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಐದು ಚುನಾವಣೆಗೆ ಒಳಪಡುವ ರಾಜ್ಯಗಳಲ್ಲಿ ಜನರಿಗೆ ನೀಡಲಾಗುವ COVID-19 ಪ್ರಮಾಣಪತ್ರಗಳಿಂದ ಪ್ರಧಾನ ಮಂತ್ರಿಯ ಚಿತ್ರವನ್ನು ಹೊರಗಿಡಲು ಆರೋಗ್ಯ ಸಚಿವಾಲಯವು CoWIN ಪ್ಲಾಟ್‌ಫಾರ್ಮ್‌ನಲ್ಲಿ ಅಗತ್ಯ ಫಿಲ್ಟರ್‌ಗಳನ್ನು ಅನ್ವಯಿಸುತ್ತದೆ’ ಎಂದು ಮೂಲಗಳು ತಿಳಿಸಿವೆ.

Latest article