ಮಹಾರಾಷ್ಟ್ರದ ಶಿವಸೇನೆ ನಾಯಕ ಏಕನಾಥ್ ಶಿಂಧೆ ಬಂಡಾಯ ರಾಜಕೀಯ ಬಿರುಗಾಳಿಯನ್ನು ಸೃಷ್ಟಿಸಿದೆ. ಈ ಮಧ್ಯೆ ಮಹಾರಾಷ್ಟ್ರ ವಿಧಾನಸಭೆಯನ್ನು ವಿಸರ್ಜಿಸಬಹುದು ಎಂಬ ಸುದ್ದಿ ಹರಿದಾಡುತ್ತಿದೆ.
ಶಿವಸೇನೆ ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್ ಟ್ವೀಟ್ ಮಾಡಿದ್ದಾರೆ. ಶಿವಸೇನೆ ಸಚಿವ ಏಕನಾಥ್ ಶಿಂಧೆ ಪಕ್ಷದ ಶಾಸಕರೊಂದಿಗೆ ಅಸ್ಸಾಂ ತಲುಪಿದ್ದಾರೆ. ಇಲ್ಲಿನ ರಾಡಿಸನ್ ಬ್ಲೂ ಹೊಟೇಲ್ನಲ್ಲಿ ತಂಗಿದ್ದಾರೆ. ಬಿಕ್ಕಟ್ಟು ಇನ್ನಷ್ಟು ತೀವ್ರಗೊಂಡಿದೆ. ತಮಗೆ ಆರು ಮಂದಿ ಪಕ್ಷೇತರ ಶಾಸಕರ ಬೆಂಬಲವೂ ಇದೆ ಎಂದು ಏಕನಾಥ್ ಶಿಂಧೆ ಹೇಳಿಕೊಂಡಿದ್ದಾರೆ.. ಹೀಗಾಗಿ ಒಟ್ಟು 46 ಶಾಸಕರು ತಮ್ಮೊಂದಿಗೆ ಇದ್ದಾರೆ. ಬೆಳಿಗ್ಗೆ ನಾನು ಏಕನಾಥ್ ಶಿಂಧೆ ಅವರೊಂದಿಗೆ ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದ್ದೇನೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.
ಗುವಾಹಟಿ ವಿಮಾನ ನಿಲ್ದಾಣದಲ್ಲಿ ಏಕನಾಥ್ ಶಿಂಧೆ, ಬಾಳಾಸಾಹೇಬ್ ಠಾಕ್ರೆ ಅವರ ಹಿಂದುತ್ವವನ್ನು ಮುಂದುವರಿಸುವುದಾಗಿ ಮತ್ತೊಮ್ಮೆ ಹೇಳಿದರು. ಅವರು ಬಾಳಾಸಾಹೇಬ್ ಠಾಕ್ರೆ ಅವರ ಹಿಂದುತ್ವವನ್ನು ಬಿಟ್ಟಿಲ್ಲ ಎಂದು ಸೂರತ್ ವಿಮಾನ ನಿಲ್ದಾಣದಲ್ಲಿ ಹೇಳಿದ್ದರು. “ಉದ್ಧವ್ ಠಾಕ್ರೆ ಅವರು ಬಿಜೆಪಿಯೊಂದಿಗೆ ಸರ್ಕಾರ ರಚಿಸಬೇಕೆಂದು ನಾನು ಬಯಸುತ್ತೇನೆ ಎಂದು ಅವರು ಹೇಳಿದ್ದರು.