ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ನಾಯಕರಿಗೆ ನಿಸ್ವಾರ್ಥ ಮತ್ತು ಶಿಸ್ತಿನಿಂದ ಕೆಲಸ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಪಕ್ಷವನ್ನು ಮತ್ತೆ ಬಲಪಡಿಸಲು ಯಾವುದೇ ಮಂತ್ರದಂಡ ಇಲ್ಲ. ಪಕ್ಷವು ಯಾವಾಗಲೂ ನಮ್ಮೆಲ್ಲರಿಗೂ ಒಳ್ಳೆಯದನ್ನು ಮಾಡಿದೆ ಮತ್ತು ಈಗ ನಿಮಗೆಲ್ಲರಿಗೂ ಕಾಂಗ್ರೆಸ್ ಪಕ್ಷದ ಸಾಲ ಮರುಪಾವತಿಸುವ ಸಮಯ ಬಂದಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
ಇನ್ನು ಸೋನಿಯಾ ಗಾಂಧಿ ನೇತೃತ್ವದ ಸಿಡಬ್ಲ್ಯೂಸಿ ಸಭೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭಾಗವಹಿಸಿದ್ದರು.