Thursday, January 27, 2022

BREAKING: ಕಾಂಗ್ರೆಸ್ ಸೇರಿದ ಸೋನು ಸೂದ್ ಮತ್ತು ಸೋನು ಸೂದ್ ತಂಗಿ ಮಾಳವಿಕಾ ಸೂದ್!

Must read

ನವದೆಹಲಿ: ನಟ ಸೋನು ಸೂದ್ ಅವರ ಸಹೋದರಿ ಮಾಳವಿಕಾ ಸೂದ್ ಅವರು ಪಂಜಾಬ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸುತ್ತಿದ್ದಾರೆ. ಫೆಬ್ರವರಿ 14 ರಂದು ಪಂಜಾಬ್ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತಗಳ ಎಣಿಕೆ ನಡೆಯಲಿದೆ. ಇದೆ ವೇಳೆ ಸೋನು ಸೂದ್ ತಮ್ಮ ಸಹೋದರಿಯನ್ನು ಬೆಂಬಲಿಸುತ್ತಾರೆ ಎಂದು ಹೇಳಿದರು.

ಕಾಂಗ್ರೆಸ್‌ನ ಪಂಜಾಬ್ ಘಟಕದ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ರಾಜ್ಯ ಚುನಾವಣೆಗೆ ಮುಂಚಿತವಾಗಿ ಈ ಬೆಳವಣಿಗೆಯನ್ನು “ಗೇಮ್ ಚೇಂಜರ್” ಎಂದು ಬಣ್ಣಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಮಾಳವಿಕಾ ಸೂದ್, ಜನಸೇವೆಗಾಗಿ ತನ್ನನ್ನು ತಾನು ಅರ್ಪಿಸಿಕೊಳ್ಳಲು ರಾಜಕೀಯ ಧುಮುಕಿದ್ದೇನೆ ಎಂದಿದ್ದಾರೆ. ಸೂದ್ ಅವರು ರಾಜ್ಯದ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಮತ್ತು ಶ್ರೀ ಸಿಧು ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಮಾಳವಿಕಾ ಸೂದ್ ಕಾಂಗ್ರೆಸ್ ಸೇರುತ್ತಿರುವುದನ್ನು ಉಲ್ಲೇಖಿಸಿದ ಸಿಧು, “ಕ್ರಿಕೆಟ್ ಜಗತ್ತಿನಲ್ಲಿ ಇದನ್ನು ಗೇಮ್ ಚೇಂಜರ್ ಎಂದು ಕರೆಯಲಾಗುತ್ತದೆ” ಎಂದು ಹೇಳಿದರು. ಆಕೆ ವಿದ್ಯಾವಂತ ಮಹಿಳೆಯಾಗಿದ್ದು, ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಆಕೆಯ ಪಕ್ಷಕ್ಕೆ ಹಾಗೂ ಜನಗಳ ಉತ್ತಮ ಜೀವನಕ್ಕೆ ಸಹಕಾರಿಯಾಗುವಂತೆ ಕೆಲಸ ಮಾಡಲಿದ್ದಾರೆ ಎಂದರು.

ಎನ್‌ಜಿಒ ನಡೆಸುವ ಮೂಲಕ ಹೆಸರು ಗಳಿಸಿ ಜನಸೇವೆಗೆ ಮುಡಿಪಾಗಿಟ್ಟ ಯುವತಿಯೊಬ್ಬರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ನಮಗೆ ಅತ್ಯಂತ ಸಂತಸದ ವಿಷಯ ಎಂದು ಸಿಧು ಅವರನ್ನು ಕಾಂಗ್ರೆಸ್‌ಗೆ ಸ್ವಾಗತಿಸಿದರು.

ಕಳೆದ ವರ್ಷ ನವೆಂಬರ್‌ನಲ್ಲಿ ಸೋನು ಸೂದ್ ತನ್ನ ಸಹೋದರಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದರು ಆದರೆ ಪಕ್ಷದ ಆಯ್ಕೆಯ ಬಗ್ಗೆ ಹೇಳಿರಲಿಲ್ಲ.

2017 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ 77 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಸಂಪೂರ್ಣ ಬಹುಮತವನ್ನು ಗಳಿಸಿತು ಮತ್ತು 10 ವರ್ಷಗಳ ನಂತರ SAD-BJP ಸರ್ಕಾರವನ್ನು ಹೊರಹಾಕಿತ್ತು. 117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷ 20 ಸ್ಥಾನಗಳನ್ನು ಗೆದ್ದು ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಕೇವಲ 15 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಬಿಜೆಪಿ 3 ಸ್ಥಾನಗಳನ್ನು ಪಡೆದುಕೊಂಡಿದೆ.

Also read:  ಶಾರ್ಟ್ ಮೂವಿ ಮಾಡುವ ಹುಚ್ಚಾಟ: ತಂದೆ ಎದುರು ಕಿಡ್ನ್ಯಾಪ್​ ಕಥೆ ಕಟ್ಟಿದ ಮಗ..!

Latest article