ಉತ್ತರ ಪ್ರದೇಶದಿಂದ ಬಿಜೆಪಿ ಸಂಸದರಾಗಿರುವ ವರುಣ್ ಗಾಂಧಿ ರೈತರ ಬೆಂಬಲಕ್ಕೆ ಬಹಿರಂಗವಾಗಿಯೇ ನಿಂತಿದ್ದಾರೆ. ಸದ್ಯ ಅವರು ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು. ಅದರಲ್ಲಿ ರೈತ ಚಳವಳಿ ವೇಳೆ ಹುತಾತ್ಮರಾದ 700ಕ್ಕೂ ಹೆಚ್ಚು ರೈತರಿಗೆ ತಲಾ ಒಂದು ಕೋಟಿ ರೂಪಾಯಿ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.
ಅಲ್ಲದೇ ಲಖೀಂಪುರ ಖೇರಿಯಲ್ಲಿ 5 ರೈತರ ಮೇಲೆ ವಾಹನ ಹರಿಸಿ ಹತ್ಯೆಗೈದ ಘಟನೆ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ ಎಂದು ಹೇಳಿರುವ ಅವರು, ಕೇಂದ್ರ ಸಚಿವ ಅಜಯ್ ಮಿಶ್ರಾ ವಿರುದ್ಧವೂ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ ಎಂದು ಬರೆದಿರುವ ಅವರು, ಈ ನಿರ್ಧಾರವನ್ನು ಮೊದಲೇ ತೆಗೆದುಕೊಳ್ಳಬೇಕಿತ್ತು, ಈಗ MSP ಮೇಲೆ ಕಾನೂನುನನ್ನು ರಚಿಸ ಬೇಕಾಗಿದೆ. ಹಾಗೆ ಮಾಡುವುದರಿಂದ ರೈತರು ಆಂದೋಲನವನ್ನು ಅಂತ್ಯಗೊಳಿಸಿ ಗೌರವಯುತವಾಗಿ ಮನೆಗೆ ಮರಳಬಹುದು. ಎಂದು ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ವರುಣ್ ಗಾಂಧಿ ಪತ್ರದಲ್ಲಿನ 5 ಪ್ರಮುಖ ವಿಷಯಗಳು
1. 700 ರೈತರು ಹುತಾತ್ಮರಾಗುವ ಮುಂಚೆ ನಿರ್ಧಾರ ಕೈಗೊಳ್ಳಬಹುದಿತ್ತು.
2. ಕೇಂದ್ರ ಸಚಿವರ ವಿರುದ್ಧ ಕಠಿಣ ಕ್ರಮವಾಗಬೇಕು.
3. MSP ಮೇಲೆ ಕಾನೂನು ರಚನೆಯಾಗಬೇಕು.
4. ಸಕಾಲದಲ್ಲಿ ರೈತರ ಸಮಸ್ಯೆಗಳನ್ನು ಪರಿಹರಿಸಬೇಕು.
5. ಲಖಿಂಪುರ ಖೇರಿ ಪ್ರಕರಣದಲ್ಲಿ ನಿಮ್ಮಿಂದ ನ್ಯಾಯವನ್ನು ನಿರೀಕ್ಷಿಸಲಾಗುತ್ತಿದೆ ಎಂದು ಬರೆದಿದ್ದಾರೆ.